Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ರ ಅಂಕ ಬದಲು 525ಕ್ಕೆ ಇಳಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ಅಂಕ 625ರ ಬದಲು 525ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಅಂಕ ಕಡಿತ ಮಾಡುವುದರ ಜೊತೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ತೃತೀಯ ಭಾಷೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಂಕ ನೀಡುವ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿ ತರಲು ಮುಂದಾಗಿದೆ ಎಂದು ಸಚಿವರು ತಿಳಿಸಿದರು.


2026ರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ತೆಗೆದುಕೊಂಡು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಜಾರಿ ತರಲು ಸರ್ಕಾರ ಮುಂದಾಗಿದೆ. ಈ ಮೂಲಕ ಇನ್ಮುಂದೆ ಪಾಸ್ ಅಥವಾ ಫೇಲ್ ಬದಲು ಗ್ರೇಡ್ ನೀಡಲು ತೀರ್ಮಾನಿಸಿದೆ.

ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದ್ದು ಮಾ.31ರಂದು ಎಸ್ಸೆಸ್ಸೆಲ್ಸಿಯ ಹಿಂದಿ ಪರೀಕ್ಷೆ ನಡೆಯಲಿದೆ. ತ್ರಿಭಾಷಾ ಸೂತ್ರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕುವುದಾಗಿ ಎಚ್ಚರಿದ್ದವು. ಏತ್ಮನಧ್ಯೆ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಬದಲು ಗ್ರೇಡ್ ವ್ಯವಸ್ಥೆ ಜಾರಿ ತರಲು ಮುಂದಾಗಿದೆ.

ಹಿಂದಿ, ಸಂಸ್ಕೃತ, ಮರಾಠಿ, ತುಳು, ತಮಿಳು ಸೇರಿದಂತೆ ಇನ್ನಿತರ ಭಾಷೆಗಳನ್ನ ತೃತೀಯ ಭಾಷೆಯಾಗಿ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎ,ಬಿ,ಸಿ,ಡಿ ರೀತಿ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಗ್ರೇಡಿಂಗ್ ವ್ಯವಸ್ಥೆಯು ಅಂತಿಮ ಪರೀಕ್ಷೆ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಪಪಡಿಸಿದ ಸಚಿವರು, ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.

ಎಸ್ಸೆಸ್ಸೆಲ್ಸಿಯ ಪರೀಕ್ಷೆ ತೃತೀಯ ಭಾಷೆಗಳಿಗೆ ಮಾತ್ರ ಗ್ರೇಡ್ ನೀಡುವ ತೀರ್ಮಾನ ಕೈಗೊಂಡಿದ್ದು, ಉಳಿದ ತರಗತಿಗಳಿಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ತೃತೀಯ ಭಾಷೆ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದೆ ಎಂದರು.

1ನೇ ತರಗತಿ ಸೇರಲು 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮದಲ್ಲಿ ಎರಡು ತಿಂಗಳು ವಿನಾಯಿತಿ ಈಗಾಗಲೇ ನೀಡಿದೆ. ಕೇಂದ್ರ ಪಠ್ಯಕ್ರಮ ಆಧಾರಿತ ರಾಜ್ಯದಲ್ಲಿರುವ ಸಿಬಿಎಸ್​ಸಿ, ಐಸಿಎಸ್​​​​ಸಿ ಶಾಲೆಗಳು ಒಳಗೊಂಡಂತೆ ಎಲ್ಲಾ ಶಾಲೆಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಸಚಿವರು ಮಾಹಿತಿ ಮಾಹಿತಿ ನೀಡಿದರು.
ಕಳೆದ ವರ್ಷ ಸುಮಾರು 1.64 ಲಕ್ಷ ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗಳಲ್ಲಿ ಅನುತೀರ್ಣಗೊಂಡಿದ್ದರು. ಈ ಪೈಕಿ 1.48 ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲಿ ಫೇಲಾಗಿದ್ದರು ಎಂದು ಸಚಿವರು ಇದೇ ವೇಳೆ ತಿಳಿಸಿದರು.
 

ಸ್ವಾಗತಾರ್ಹ: ಹಿಂದಿ ಪರೀಕ್ಷೆಯ ಅಂಕಗಳನ್ನು ಒಟ್ಟು ಅಂಕಗಳಿಕೆಗೆ ಪರಿಗಣಿಸದಂತೆ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವನ್ನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸ್ವಾಗತಿಸಿದ್ದಾರೆ.
ರಾಜ್ಯ ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಲಾದ ದ್ವಿಭಾಷಾ ನೀತಿಗೆ ಈ ತೀರ್ಮಾನ ಪೂರಕವಾಗಿದ್ದು
, ವಿದ್ಯಾರ್ಥಿಗಳ ಮೇಲೆ ಅನಗತ್ಯ ಭಾಷಾ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಕನ್ನಡ ಭಾಷೆಯ ಬೆಳವಣಿಗೆಗೆ ಉತ್ತೇಜನ ನೀಡಲಿದೆ ಎಂದು ಅವರು ತಿಳಿಸಿದರು.

ಕನ್ನಡದ ಹಿತದೃಷ್ಠಿಯಿಂದ ಈ ನಿರ್ಧಾರವು ಅತ್ಯಂತ ಮಹತ್ವದಾಗಿದ್ದು, ರಾಜ್ಯದ ಭಾಷಾ ಸ್ವಾಭಿಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದಿರುವ ಬಿಳಿಮಲೆ, ಕನ್ನಡ ಪರವಾದ ಇಂತಹ ನೀತಿಗಳನ್ನು ಸರ್ಕಾರವು ಮುಂದುವರೆಸಬೇಕು ಎಂದು ಹೇಳಿದರು.

ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಕನ್ನಡ ಸ್ನೇಹಿಯಾಗಿ ರೂಪಿಸುವ ದಿಕ್ಕಿನಲ್ಲಿ ಈ ತೀರ್ಮಾನ ಪರಿಣಾಮಕಾರಿಯಾದ ಹೆಜ್ಜೆಯಾಗಿದೆ ಎಂದು ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ