Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಂಎಫ್​ಗೆ ಅರ್ಜಿ ಹಾಕಲು ಸೂಚನೆ-ಡಿಸಿಎಂ ಡಿಕೆಶಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್​​ಸಿಎಲ್​ಗೆ ಅರ್ಜಿ ಹಾಕಲು ಕೆಎಂಎಫ್​​ಗೆ ಸೂಚನೆ ನೀಡಿದ್ದು
10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು ಅಭಿವೃದ್ಧಿ, ನಾನಾ ಸಮಸ್ಯೆಗಳ ನಿವಾರಣೆ, ನಂಬಿಕೆ ನಕ್ಷೆ, ಖಾತಾ ವಿತರಣೆ, ಹಸಿರು ಬೆಂಗಳೂರು ಮತ್ತಿತರ ವಿಚಾರಗಳ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್​ ಬೆಂಗಳೂರು ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಕುಮಾರಪಾರ್ಕ್ ಸರ್ಕಾರಿ ನಿವಾಸದಲ್ಲಿ ಬುಧವಾರ ಸಭೆ ನಡೆಸಿದರು.

ಬಳಿಕ ಮಾಧ್ಯಮಗಳಿಗೆ ವಿವರಿಸಿದ ಡಿಸಿಎಂ ಅವರು, ಬಿಎಂಆರ್​​ಸಿಎಲ್​ನವರು ಟೆಂಡರ್ ಕರೆದಿದ್ದು ಅಮೂಲ್ ಹೊರತಾಗಿ ಕೆಎಂಎಫ್ ಸೇರಿದಂತೆ ಬೇರೆ ಯಾರೂ ಮಳಿಗೆಗಳನ್ನು ತೆರೆಯಲು ಅರ್ಜಿ ಹಾಕಿಲ್ಲ. ಈಗ ಕೆಎಂಎಫ್​ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್​​ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ ಎಂದು ಸಚಿವರು ತಿಳಿಸಿದರು.


ಪಕ್ಷ ಸಂಘಟನೆ ವಿಚಾರ ಹಾಗೂ ಪಾಲಿಕೆ ಚುನಾವಣೆ ಸೇರಿದಂತೆ ನಮ್ಮ ಪಕ್ಷದ ಶಾಸಕರ ಜತೆ ಚರ್ಚೆ ಮಾಡಿದ್ದೇನೆ. ಜಿಬಿಎಯಲ್ಲಿ ಎಷ್ಟು ಪಾಲಿಕೆ ರಚನೆ ಮಾಡಬೇಕು ಎನ್ನುವ ವಿಚಾರವಾಗಿ ಎಲ್ಲಾ ನಾಯಕರ ಜೊತೆ ಚರ್ಚೆ ಮಾಡಿದ್ದು, ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ಬಾಕಿ ಇದೆ. ಅವರ ವಿಶ್ವಾಸ ಪಡೆದು ತೀರ್ಮಾನ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದರು.


ಆಸ್ತಿ ಖಾತಾ ದಾಖಲೆ ಆಂದೋಲನ ರೂಪಿಸಲಾಗಿದ್ದು ಜುಲೈ ತಿಂಗಳಿನಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಕ್ಷೇತ್ರದಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದೆ. 25 ಸಾವಿರ ಆಸ್ತಿಗಳ ಖಾತಾ ದಾಖಲೆಗಳು ಸಿದ್ಧಗೊಂಡಿದ್ದು ಜುಲೈ 1ರಿಂದ ಇಡೀ ತಿಂಗಳು ಈ ಆಸ್ತಿ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಮನೆಗಳು ಆಸ್ತಿಗಳಿದ್ದು ಈ ಪೈಕಿ 5 ಲಕ್ಷ ಮಂದಿ ದಾಖಲೆ ಅಪ್​ಲೋಡ್ ಮಾಡಿದ್ದಾರೆ. ಇನ್ನೂ 20 ಲಕ್ಷ ಆಸ್ತಿಗಳ ದಾಖಲೆ ಬಾಕಿ ಇದೆ ಎಂದರು.

ಜುಲೈ 1ರಿಂದ ಇ ಖಾತಾ ವಿಚಾರವಾಗಿ ಆಂದೋಲನ ಮಾಡಲಾಗುವುದು. ಆಮೂಲಕ ಖಾಸಗಿ ಆಸ್ತಿ ಮಾಲೀಕರು ಜಾಗೃತಿ ವಹಿಸಿ, ತಮ್ಮ ದಾಖಲೆಗಳನ್ನು ನೀಡಿ ಇ - ಖಾತಾ ಮಾಡಿಸಿಕೊಳ್ಳಲು ಒಂದು ತಿಂಗಳ ಕಾಲ ಆಂದೋಲನ ಹಮ್ಮಿಕೊಳ್ಳಲಾಗುವುದು. ಈ ವಿಚಾರವಾಗಿ ಮನೆ ಮನೆ ಪ್ರಚಾರ, ಜಾಹೀರಾತು ಸೇರಿದಂತೆ ಪ್ರಚಾರ ಮಾಡಲಾಗುವುದು ಎಂದು ಡಿಸಿಎಂ ಅವರು ಪ್ರತಿಕ್ರಿಯಿಸಿದರು.


ಸಹಾಯವಾಣಿ: ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಕಸ ಇರುವ ಜಾಗದ ಫೋಟೋ ತೆಗೆದು, ಅದನ್ನು ಈ ಸಂಖ್ಯೆಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸ ವಿಲೇವಾರಿ ಮಾಡಲಾಗುವುದು ಎಂದ ಅವರು, ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ, ಶಾಸಕರು ತಮ್ಮ ಕ್ಷೇತ್ರಗಳ ವಾರ್ಡ್​​​ಗಳ ಬಗ್ಗೆ ಗಮನಹರಿಸಿ ರಸ್ತೆ ಕಾಮಗಾರಿಗೆ ಅನುದಾನವನ್ನು ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ನಡೆಯುತ್ತಿದೆ. ಅನೇಕ ಕಡೆಗಳಲ್ಲಿ ನಾನೇ ಕಾಮಗಾರಿ ಗುಣಮಟ್ಟ ಪರೀಕ್ಷೆ ಮಾಡಿದ್ದೇನೆ. ಕೆಲವು ಕಡೆ ಕಾಮಗಾರಿ ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಬಿ-ಖಾತಾ ನೀಡುವ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಕಾನೂನು ಆಯಾಮಗಳ ಚರ್ಚೆ ಮಾಡಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಮಾಜಿ ಸಚಿವ ಎಂ.ಕೃಷ್ಣಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಎಸ್.ಟಿ.ಸೋಮಶೇಖರ್, ಪ್ರಿಯಾ ಕೃಷ್ಣ, ಆನೇಕಲ್ ಶಿವಣ್ಣ, ಎಂ.ಸಿ.ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ