Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್ ಅವಕಾಶ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.

ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್‍ಶಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ:
ಮಹಿಳಾ ಆಯವ್ಯಯದಡಿ 08 ಮಹಿಳೆಯರು,
ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು
ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್‍ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್‍ಶಿಪ್‍ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್‍ಶಿಪ್‍ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68  ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು 2025 ರ ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಮಾಧ್ಯಮ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು