Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀಗ ಹಾಕಿದ ಮನೆಗಳ ಕಳವು ಮಾಡುತ್ತಿದ್ದ ಅಂತರ್​​​​ ರಾಜ್ಯ ಕಳ್ಳರ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್​​​​ ಮಾಡಿ ಕಳ್ಳತನ ಮಾಡುತ್ತಿದ್ದ ರಾಜಸ್ಥಾನ ಮೂಲದ ಅಂತರ್​​​​ ರಾಜ್ಯ ಕಳ್ಳರನ್ನು ದಾವಣಗೆರೆಯ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.


ಶ್ಯಾಮ್​ ಸಿಂಗ್​ (28), ಕವರ್ ಪಾಲ್(24), ಪ್ರತಾಪ್​ ಸಿಂಗ್​ (33) ಬಂಧಿತರಾಗಿದ್ದು, ಇವರಿಂದ 15,37,800 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾನಗರದ ನಿವಾಸಿ ರಂಗನಾಥ ಎಂಬುವರ ಮನೆಯಲ್ಲಿ ಜನವರಿ 09 2025 ರಂದು ಮಧ್ಯಾಹ್ನ ಕಳ್ಳತನ ಆಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಮೂರು ಜನ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.


ಘಟನೆಯ ಹಿನ್ನೆಲೆ:
ಜನವರಿ 09 2025 ರಂದು ವಿನಾಯಕ ಬಡಾವಣೆ ವಿಎಮ್​​ಜಿ ಲೇಔಟ್​​ ನಿವಾಸಿ ರಂಗನಾಥ ಅವರ ಮನೆ ಕಳ್ಳತನ ಆಗಿತ್ತು. "ಬೆಂಗಳೂರಿಗೆ ಹೋಗಿದ್ದಾಗ ಮನೆ‌ಕಳ್ಳತನ ‌ಆಗಿತ್ತು. ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು
, ಗಾಡ್ರೇಜ್ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳನ್ನು ಬೆಳ್ಳಿ ಸಾಮಗ್ರಿಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಪತ್ತೆ ಮಾಡಿಕೊಡಿ ಎಂದು" ಮನೆ ಮಾಲೀಕ ರಂಗನಾಥ ಅವರು ಹಾಜರಾಗಿ ದೂರು ನೀಡಿದ್ದರು. ದೂರು ದಾಖಲು ಮಾಡಿಕೊಂಡಿದ್ದ ವಿದ್ಯಾನಗರ ಠಾಣೆಯ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

ಗುಜರಾತ್​ ರಾಜ್ಯದ ಸೂರತ್​​ ಸಿಟಿ ಸಾರೋಲಿ ಪೊಲೀಸರ ಸಹಕಾರ: ಗುಜರಾತ್​​ ರಾಜ್ಯದ ಸೂರತ್​​ ಸಿಟಿ ಸಾರೋಲಿ ಪೊಲೀಸರ ಸಹಕಾರದಿಂದ ದಾವಣಗೆರೆ ವಿದ್ಯಾನಗರ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 12,97,200 ರೂಪಾಯಿ ಬೆಲೆಯ 162.150 ಗ್ರಾಂ ತೂಕದ ಬಂಗಾರದ ಆಭರಣಗಳು, 1,08,000 ರೂಪಾಯಿ ಬೆಲೆಯ 1350 ಗ್ರಾಂ ತೂಕದ ಬೆಳ್ಳಿ ಸಾಮಗ್ರಿಗಳು 95,600 ರೂಪಾಯಿ ನಗದು ಹಣ 34,000 ರೂಪಾಯಿ ಬೆಲೆಯ ಒಟ್ಟು 6 ಮೊಬೈಲ್ ಪೋನ್​ಗಳು ಹಾಗು 3000 ರೂಪಾಯಿ ಬೆಲೆಯ ಎರಡು ವಾಚ್​ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಆರೋಪಿತರ ಹಿನ್ನೆಲೆ:
ದಾವಣಗೆರೆ ಜಿಲ್ಲೆಯ ಹರಿಹರ ನಗರ ಠಾಣೆ
, ಹಳಿಯಾಳ ಠಾಣೆ, ಧಾರವಾಡ, ತುಮಕೂರು ಬಡಾವಣೆ, ತಿಪಟೂರು, ಮದ್ಯಪ್ರದೇಶದ ಭೂಪಾಲ್​ನಲ್ಲಿ ಸೇರಿದಂತೆ ವಿವಿಧ ಕಡೆ ಆರೋಪಿತರು 06 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿರುತ್ತದೆ. ಪ್ರಕರಣ ಭೇದಿಸಿದ ಸಿಬ್ಬಂದಿಯನ್ನು ಎಸ್ಪಿ ಉಮಾ ಪ್ರಶಾಂತ್​ ಅವರು ಶ್ಲಾಘಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ