Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಹಾಸ್ ಶೆಟ್ಟಿ ಹತ್ಯೆ, ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ ಕೇಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (
NIA) ನಡೆಸಲಿದೆ.

ಮಂಗಳೂರಿನಲ್ಲಿ ನಡೆದ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ. ಸುಮಾರು ಒಂದು ತಿಂಗಳ ಹಿಂದೆ ನಡೆದ ಈ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನತೆಯ ವಾತಾವರಣ ಸೃಷ್ಟಿಸಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.

ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಘಟನೆಯ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ವಿಶ್ವ ಹಿಂದೂ ಪರಿಷತ್ (VHP) ಮತ್ತು ಇತರ ಹಿಂದೂ ಸಂಘಟನೆಗಳು ಮೇ 3 ರಂದು ಜಿಲ್ಲಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು.

ದಕ್ಷಿಣ ಕನ್ನಡದ ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು NIAಗೆ ವಹಿಸಬೇಕೆಂದು ಒತ್ತಾಯಿಸಿದ್ದರು.
ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (
PFI) ಕಾರ್ಯಕರ್ತರು ಈ ಕೊಲೆಯಲ್ಲಿ ಭಾಗಿಯಾಗಿರಬಹುದು ಎಂದು ಅವರು ತಮ್ಮ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಇದಕ್ಕೂ ಮೊದಲು, ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ಅದೇ ಪ್ರದೇಶದಲ್ಲಿ PFI ಕಾರ್ಯಕರ್ತರು ಹತ್ಯೆ ಮಾಡಿದ್ದರು. ಸುಹಾಸ್ ಶೆಟ್ಟಿ ಕ್ರಿಮಿನಲ್ ದಾಖಲೆ ಹೊಂದಿದ್ದಾರೆ.

ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಮತ್ತು ಮಂಗಳೂರು ನಗರದಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈತ ಈ ಹಿಂದೆ ಬಜರಂಗದಳದೊಂದಿಗೆ ಸಂಬಂಧ ಹೊಂದಿದ್ದ ಮತ್ತು 23 ವರ್ಷದ ಮುಸ್ಲಿಂ ಯುವಕ ಮೊಹಮ್ಮದ್ ಫಾಜಿಲ್ ಹತ್ಯೆಯಲ್ಲಿ ಆತನ ಹೆಸರು ಕೇಳಿಬಂದಿತ್ತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ