ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026-27ನೇ ಸಾಲಿನ “ಕೃಷಿ ಪಂಡಿತ ಪ್ರಶಸ್ತಿಗೆ” ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ
K.Kisan Portal ರಡಿ RSK Login ಅಥವಾ Citizen Login ಮೂಲಕ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ / ನಾಗರೀಕ ಸೇವಾ ಕೇಂದ್ರ / ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID (FRUITS ID) ಸಂಖ್ಯೆಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಅರ್ಜಿದಾರರಿಂದ ಅಗತ್ಯ ದಾಖಲಾತಿಗಳೊಂದಿಗೆ ಭೌತಿಕವಾಗಿಯೂ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಕೃಷಿ ಪಂಡಿತ ಪ್ರಶಸ್ತಿಗೆ ಪುರುಷರು ಮತ್ತು ಮಹಿಳೆಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಸಲು ಕ್ರಮ ವಹಿಸುವುದು. ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿದಾರರ ತಾಕುಗಳಿಗೆ ಜಿಲ್ಲಾ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪರಿಶೀಲನಾ ತಂಡವು ಕ್ಷೇತ್ರ ಭೇಟಿ ಕೈಗೊಂಡು ಮಾರ್ಗಸೂಚಿಯನ್ವಯ ಪರಿಶೀಲಿಸಿ ಅತ್ಯುತ್ತಮವೆನಿಸುವಂತಹ ಪುರುಷರ ವಿಭಾಗದಲ್ಲಿ 03 ಮತ್ತು ಮಹಿಳೆಯರ ವಿಭಾಗದಲ್ಲಿ 03 ಅರ್ಜಿಗಳನ್ನು ಪಊರಕ ದಾಖಲಾತಿಗಳೊಂದಿಗೆ ಕೃಷಿ ಪಂಡಿತ ಪ್ರಶಸ್ತಿ ಪರಿಶೀಲನಾ ತಂಡದ ಸದಸ್ಯರ ಮತ್ತು ಸಂಬಂಧಪಟ್ಟ ಅರ್ಜಿದಾರರು ಇವರಿಂದ ದೃಢೀಕರಣ ಮಾಡಿಸಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಶಿಫಾರಸ್ಸಿನೊಂದಿಗೆ ಕೇಂದ್ರ ಕಛೇರಿಗೆ ಸಲ್ಲಿಸಲಾಗುವುದು. ಸ್ವೀಕೃತವಾದ ಅರ್ಜಿಗಳು ಮಾರ್ಗಸೂಚಿಯನ್ವಯ ಇರುವುದನ್ನು ಖಾತ್ರಿಪಡಿಸಿಕೊಂಡ ನಂತರವಷ್ಟೇ ಕೇಂದ್ರ ಕಛೇರಿಗೆ ಕಳುಹಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವುದು. ಈ ಕಾರ್ಯದಲ್ಲಿ ಹೆಚ್ಚಿನ ಪ್ರಗತಿಪರ ರೈತರು ಭಾಗವಹಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಕೋರಿದ್ದಾರೆ.



