ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ (5 ರಿಂದ 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್: www.swd.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 30.06.2026 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 31.07.2026 ಕೊನೆಯ ದಿನವಾಗಿದೆ.
ಆಯ್ಕೆಯಾದವರಿಗೆ ಉಚಿತ ಊಟ, ವಸತಿ, ಸಮವಸ್ತ್ರ ಮತ್ತು ಪಠ್ಯ ಸಾಮಗ್ರಿಗಳನ್ನು ನೀಡಲಾಗುವುದು. ಅರ್ಜಿಯೊಂದಿಗೆ ಭಾವಚಿತ್ರ, ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆದಾಯ 2.50 ಲಕ್ಷದ ಒಳಗಿರಬೇಕು) ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


