ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ ಸಮನಾಂತರ ಡಿಪ್ಲೋಮಾ ಐಟಿಐ) ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಜೂನ್ 17ರಂದು ಪರಿಶೀಲನೆ ಮಾಡುವರು. ಜೂನ್ 19ರಂದು ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪ್ರಕಟಣೆ ಮಾಡುವರು.
ಜೂನ್ 25ರಂದು ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.



