ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (UDID - Unique Disability ID) ಯೋಜನೆಯ ಉಸ್ತುವಾರಿಗಾಗಿ 'ರಾಜ್ಯ ಸಂಯೋಜಕರು' ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನಾಂಕವಾಗಿದೆ. ನಿಗದಿತ ಶೈಕ್ಷಣಿಕ ಅರ್ಹತೆ ಹಾಗೂ ಹೆಚ್ಚಿನ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ಲಿಂಕ್ https://dwdsc.karnataka.gov.in/uploads/application%20for%20udid%20job_1783068367.pdf ಮೂಲಕ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ, 6ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ. ಗೋಪುರ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಈ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‍ಸೈಟ್: http://dwdsc.karnataka.gov.in ಹಾಗೂ ದೂರವಾಣಿ ಸಂಖ್ಯೆ: 080-22866066, 22860907 ಗೆ ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



