Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. 

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ  ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು  ಆದೇಶ ಹೊರಡಿಸಿತು. ಅದರಂತೆ 2001ರಿಂದ 2016 ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.

2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

 ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು. 

 2017 ರಿಂದ 2023 ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.

ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ -ಮೇಲ್ ವಿಳಾಸ [email protected] ಗೆ ದಿನಾಂಕ:30-09-2024 ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ