Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ  ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ.

ವಡ್ಡರ್ಸೆ ರಘುರಾಮ ಶೆಟ್ಟಿಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ - ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ  ನಾಮನಿರ್ದೇಶನ ಮಾಡಬಹುದಾಗಿದೆ.

ವಡ್ಡರ್ಸೆ ರಘುರಾಮಶೆಟ್ಟಿ ಅವರ ಪರಿಚಯ:
ಓದುಗರ ಸಂಪಾದಕ ಎಂದೇ ಹೆಸರಾಗಿದ್ದ ದಿ.ವಡ್ಡರ್ಸೆ ರಘುರಾಮ ಶೆಟ್ಟಿಯವರು. 1960 ದಶಕದಿಂದ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ. ಮಾಧ್ಯಮವು ವಾಣಿಜ್ಯೋದ್ಯಮಿಗಳ ಹಾಗೂ ರಂಗದ ಪರಿಚಯವಿಲ್ಲದವರ ಆಡುಂಬೊಲವಾಗಬಾರದು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದರು.

ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂಗಾರುದಿನಪತ್ರಿಕೆಯನ್ನು ಪ್ರಾರಂಭಿಸಿ,  ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆ ತಂದವರು.

ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತುವ, ದನಿಯಿಲ್ಲದವರ ದನಿಯಾಗಿದ್ದರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದರು.

ಪ್ರಶಸ್ತಿಗೆ ಅರ್ಹತೆಗಳು:
ಮುದ್ರಣ
ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವಾನುಭವ ಹೊಂದಿರಬೇಕು. ಹಿರಿಯರಿಗೆ ಆದ್ಯತೆ ನೀಡಲಾಗುವುದು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10 ರಿಂದ 15 ಲೇಖನಗಳು ಪ್ರಕಟವಾಗಿರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿರ್ಮಿಸಿರಬೇಕು.

ನಾಮನಿರ್ದೇಶನಗಳನ್ನು ಸಲ್ಲಿಸಲು 2024ನೇ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ.
ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್ ಫೆಂಟ್ರಿ ರಸ್ತೆ), ಬೆಂಗಳೂರು 560 001 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ [email protected] -ಮೇಲ್ ಮೂಲಕ ಸಲ್ಲಿಸಬಹುದಾಗಿದೆ.

ಇತರೆ ಜಿಲ್ಲೆಗಳ ಪತ್ರಕರ್ತರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ