Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 2024 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

ಬೆಂಗಳೂರಿನ ಅಭಿಮಾನಿ ಪ್ರಕಾಶನಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಅಭಿಮಾನಿ ಪ್ರಶಸ್ತಿಮೈಸೂರಿನ ಮೈಸೂರು ದಿಗಂತಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ, ಬೆಂಗಳೂರಿನ ಪ್ರಜಾ ಸಂದೇಶಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.

2023 ನೇ ಸಾಲಿನ ಪ್ರಶಸ್ತಿಗಳು: 2023 ಜನವರಿ ಯಿಂದ ಡಿಸೆಂಬರ್-2023 ರವರೆಗೆ, ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಅಭಿಮಾನಿ ಪ್ರಶಸ್ತಿ-2023”, “ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ-2023” ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ಪ್ರಶಸ್ತಿ-2023” ಹಾಗೂ ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ದತ್ತಿ ಪ್ರಶಸ್ತಿ -2023” ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

2024 ನೇ ಸಾಲಿನ ಪ್ರಶಸ್ತಿಗಳು: 2024 ಜನವರಿ ಯಿಂದ ಸೆಪ್ಟೆಂಬರ್ 2024 ರವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಅಭಿಮಾನಿ ಪ್ರಶಸ್ತಿ-2024”, “ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ-2024” ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ಪ್ರಶಸ್ತಿ-2024 ಹಾಗೂ ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿಯಾದ ವರದಿಗೆ ಅಭಿಮನ್ಯು ಪ್ರಶಸ್ತಿ -2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

 ಕನ್ನಡ ದೈನಿಕಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

ಲೇಖನ-ವರದಿಗಳನ್ನು ಇದೇ ದಿನಾಂಕ : 20/11/2024 ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಭಿಮಾನಿ ಪ್ರಶಸ್ತಿ-2023”, “ಅಭಿಮಾನಿ ಪ್ರಶಸ್ತಿ-2024” ಹಾಗೂ ಮೈಸೂರು ದಿಗಂತ ಪ್ರಶಸ್ತಿ-2023” “ಮೈಸೂರು ದಿಗಂತ ಪ್ರಶಸ್ತಿ-2024” “ಪ್ರಜಾ ಸಂದೇಶ ಪ್ರಶಸ್ತಿ-2023”, “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ ಅಭಿಮನ್ಯು ಪ್ರಶಸ್ತಿ -2023”, “ಅಭಿಮನ್ಯು ಪ್ರಶಸ್ತಿ-2024” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಥವಾ [email protected]  ಗೆ - ಮೇಲ್ ಮೂಲಕ ಕಳುಹಿಸಲು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ