Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024 ಮತ್ತು 2025ನೇ ಸಾಲಿನ
ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದ ಪುಸ್ತಕಗಳನ್ನು ಆಹ್ವಾನಿಸಿದೆ.

ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಲೇಖಕರು ಮತ್ತು ಪ್ರಕಾಶಕರು ಈ ಅವಕಾಶವನ್ನು ಬಳಸಿಕೊಳ್ಳಬಹುದು. 2024ರ ಜನವರಿಯಿಂದ ಡಿಸೆಂಬರ್‍ವರೆಗೆ ಹಾಗೂ 2025ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಗೊಂಡಿರುವ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ ಹಾಗೂ ಮಕ್ಕಳ ಸಾಹಿತ್ಯ ವಿಮರ್ಶೆ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.

ಆಸಕ್ತರು ತಮ್ಮ ಕೃತಿಯ ನಾಲ್ಕು ಪ್ರತಿಗಳನ್ನು ಲೇಖಕರ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಸಲ್ಲಿಸಬೇಕು. ಪುಸ್ತಕವು ಯಾವ ವರ್ಷದಲ್ಲಿ ಪ್ರಕಟಗೊಂಡಿದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯವಾಗಿದೆ.

ಪ್ರಶಸ್ತಿಗಾಗಿ ಪರಿಗಣಿಸಲು ಪುಸ್ತಕಗಳನ್ನು ಇದೇ ಫೆಬ್ರವರಿ 20ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ- 580004ಈ ವಿಳಾಸಕ್ಕೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8050392209, 7204396275 ಅಥವಾ 94489 81944 ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು