Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024 ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ "ಕನ್ನಡ ಪುಸ್ತಕ ಸೊಗಸು ಬಹುಮಾನ"ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್ 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -560 002 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ,  ಬೆಂಗಳೂರು -560 002 ಹಾಗೂ ವೆಬ್ಸೈಟ್  - https://kpp.kamataka.gov.in  ದೂರವಾಣಿ ಸಂಖ್ಯೆ: 080-22484516/ 22107704 ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ