Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

Advertisement
Advertisement

ಚಂದ್ರವಳ್ಳಿ ನ್ಯೂಸ್, ಉಡುಪಿ:
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಸರ್ವಾಧ್ಯಕ್ಷರಾದ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ  ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದೇಶದ ಪ್ರಸಿದ್ಧ ವೈದ್ಯರಾದ ಡಾ.ಭಾಸ್ಕರಾನಂದ ಕುಮಾರ್ ಈ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವುದು ನಮ್ಮೆಗೆಲ್ಲರಿಗೂ ಹೆಮ್ಮೆ. ವೈದ್ಯರಾಗಿ ಕಲಾವಿದರಾಗಿ ಮತ್ತು ಸಂಘಟಕರಾಗಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವೈದ್ಯ ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷ ಪ್ರೊ.ಶಂಕರ್, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣಿೈ, ಶ್ರೀನಿವಾಸ ಉಪಾಧ್ಯ, ಕಲಾಪೋಷಕ ಭುವನ ಪ್ರಸಾದ ಹೆಗ್ಡೆ, ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು,ಪ್ರಭಾಕರ್ ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಪದಾಧಿಕಾರಿಗಳಾದ ರಂಜನಿ ವಸಂತ್, ಸತೀಶ್ ಕೊಡವೂರು,ರಾಜೇಶ್ ಭಟ್ ಪಣಿಯಾಡಿ, ಅನಿತಾ ಸಿಕ್ವೇರಾ, ಆರ್ ವಸಂತ್, ಶಶಿಕಾಂತ್ ಶೆಟ್ಟಿ, ದೀಪಾ ಕರ್ಕಿ, ಚಂದ್ರಕಾಂತ್,  ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಪ್ರಸ್ತಾವನೆಗೈದು ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಜನಾದ೯ನ್‌ಕೊಡವೂರು ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು ಧನ್ಯವಾದವಿತ್ತರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!