Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್' ಸಂಚಿಗೆ ರಕ್ತ ಕುದಿಯುತ್ತಿಲ್ಲವೇ?: ಹೆಚ್.ಡಿ. ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅತ್ಯಂತ ಅಪಮಾನಕರವಾಗಿ ಅಧಿಕಾರದಿಂದ ಕೆಳಗಿಳಿದಿರುವ ಸಿದ್ದರಾಮಯ್ಯನವರಿಗೆ ತಮ್ಮ ವಿರುದ್ಧ ನಡೆದಿರುವ ಸಂಚಿನ ಬಗ್ಗೆ ರಕ್ತ ಕುದಿಯುತ್ತಿಲ್ಲವೇ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ತೀವ್ರವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿ ಆವರಣದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್‌ನಲ್ಲಿ ಭಾಗಿಯಾಗಿರುವ ಖಾಸಗಿ ವಾಹಿನಿ ಮುಖ್ಯಸ್ಥ ಹಾಗೂ ಆತನ ಸಂಗಡಿಗರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

Advertisement

ಸಿದ್ದರಾಮಯ್ಯ ಮೌನವೇಕೆ?: ಸಿದ್ದರಾಮಯ್ಯನವರು ಸುಮ್ಮನೆ ಕೂರುವ ವ್ಯಕ್ತಿಯಲ್ಲ, ಅನ್ಯಾಯವನ್ನು ಸಹಿಸುವ ಜಾಯಮಾನದವರೂ ಅಲ್ಲ. ಆದರೆ, ತಮ್ಮ ವಿರುದ್ಧ ನಡೆಸಿರುವ ಸಂಚಿನ ಕುರಿತು ಅವರು ಮೌನ ವಹಿಸಿರುವುದು ತಮಗೆ ನೋವು ತಂದಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಈ ರೀತಿಯ ಕೃತ್ಯಗಳನ್ನು ತಮ್ಮ ಬೆಂಬಲಿಸುವುದಿಲ್ಲ ಎಂದರು.

ವಿಜಯದಶಮಿ ಬಳಿಕ ಉಗ್ರ ಹೋರಾಟ ಎಚ್ಚರಿಕೆ: ಈ ವಿಷಯವನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಪೊಲೀಸ್ ಆಯುಕ್ತರು ಹಾಗೂ ಡಿಜಿಪಿಗೆ ಸುದೀರ್ಘ ದೂರು ನೀಡಲಾಗಿದೆ. ರಹಸ್ಯ ಕಾರ್ಯಾಚರಣೆಯ ಹೆಸರಿನಲ್ಲಿ ಹಣ ವಸೂಲಿ, ರಾಜಕಾರಣಿಗಳು, ಪೊಲೀಸರು ಮತ್ತು ಅಧಿಕಾರಿಗಳನ್ನು ಬ್ಲ್ಯಾಕ್​ಮೇಲ್ ಮಾಡಿರುವ ಎಲ್ಲ ಅಂಶಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಅಪರಾಧಿಗಳನ್ನು ಪೊಲೀಸರು ಬಂಧಿಸದಿದ್ದರೆ, ವಿಜಯದಶಮಿ ನಂತರ ತಾವೇ ಸ್ವತಃ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಕಿಡಿ: ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಹಾಳು ಮಾಡಲು ಹಾಗೂ ಹಣ ವಸೂಲಿ ಮಾಡುವ ಉದ್ದೇಶದಿಂದ ಈ ಸ್ಟಿಂಗ್ ಆಪರೇಷನ್ ಮಾಡಲಾಗಿದೆ. ಮಂತ್ರಿಗಳು ಮತ್ತು ಶಾಸಕರನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಇಂತಹ ಹೀನ ಕೃತ್ಯಗಳನ್ನು ಎಸಗಲಾಗುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರವೇ ಆ ಅಪರಾಧಿಗೆ ಹೆದರಿಕೊಂಡು ಕೂತಿದೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ತನಗೆ ಮುಖ್ಯಮಂತ್ರಿಯಾಗುವ ಅವಕಾಶ ಕಲ್ಪಿಸಿದ ಆ ಕ್ರಿಮಿನಲ್​ಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು 'ಕರ್ನಾಟಕ ರತ್ನ' ಪ್ರಶಸ್ತಿ ಕೊಟ್ಟುಬಿಡಿ ಎಂದು ವ್ಯಂಗ್ಯವಾಡಿದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗದ ದಸರಾ: ಶರಣ ಸಂಸ್ಕೃತಿಯ ಜನೋತ್ಸವ:ಮಂಗಳೂರಿನ ದಸರಾ; ಶಾರದಾ ಮಹೋತ್ಸವದಿಂದ ಜನೋತ್ಸವದವರೆಗೆ:… ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ-ರಮೇಶ್ ಬಾಬುನವರಾತ್ರಿ ಪ್ರಯುಕ್ತ ಅಂಭಾ ಭವಾನಿ ದೇವಿಗೆ ವಿಶೇಷ ಅಲಂಕಾರಹಾಡುಹಗಲೆ ವೃದ್ದೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಕಳ್ಳಛಲವಾದಿ ಗುರುಪೀಠದಲ್ಲಿ ಪ್ರತಿ ತಿಂಗಳ ಮೂರನೆ ಶನಿವಾರದಂದು ಆರೋಗ್ಯ ತಪಾಸಣೆ ಶಿಬಿರ ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತ್ ಎಸ್.ಯಾದವ್ ಮತ ನೀಡಲು ಮನವಿಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಸಿಜೆಐ ಸೂರ್ಯಕಾಂತ್ ಹಾಗೂ ಡಿಕೆಶಿ ಕರೆಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್' ಸಂಚಿಗೆ ರಕ್ತ ಕುದಿಯುತ್ತಿಲ್ಲವೇ?: ಹೆಚ್.ಡಿ. ಕುಮಾರಸ್ವಾಮಿ