Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ಗುಲಾಬಿ ಹಾಗೂ ಬಲೂನ್‌ನೀಡಿ ಶಾಲೆಗೆ ಆಹ್ವಾನಿಸಿದ ಇಸ್ಮಾಯಿಲ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ನಗರದ ಹಳೆ ಮಾಧ್ಯಮಿಕ ಶಾಲೆ ಆವರಣದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪಕ್ಕದಲ್ಲಿನ ಸರ್ಕಾರಿ ಮಾದರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹಾಗೂ ಬಲೂನ್‌ಗಳನ್ನು ನೀಡುವ ಮೂಲಕ ಎಸ್ ಡಿಎಂಸಿ ಅಧ್ಯಕ್ಷ ಸೈಯದ್ ಇಸ್ಮಾಯಿಲ್ ಸೋಮವಾರ ಸ್ವಾಗತಿಸಿದರು.

ಶಾಲೆ ಆರಂಭದ ಮೊದಲ ದಿನದಂದು ಸೋಮವಾರ ಮಕ್ಕಳನ್ನು ಬರಮಾಡಿಕೊಳ್ಳಲು ಶಾಲೆಯ ಮುಂಭಾಗ ಗುಲಾಬಿ ಹಾಗೂ ಬಲೂನ್‌ಗಳಿಂದ ಸಿಂಗರಿಸಲಾಗಿತ್ತು.

ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡು ಮಾತನಾಡಿದ ಸೈಯದ್ ಇಸ್ಮಾಯಿಲ್ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಸರ್ಕಾರ ನಾನಾ ರೀತಿಯ ಸೌಲಭ್ಯಗಳನ್ನು ಒದಗಿಸಿದೆ. ಎಲ್ಲವನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗುವ ಮೂಲಕ ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಉಮೆ ಸುಮಯ್ಯ, ಸಹ ಶಿಕ್ಷಕರುಗಳಾದ ಫಾತಿಮ, ಮುಬಿನಾ, ಸೀಮ, ಉಮ, ಮಂಜುಳ, ಮಂಜುನಾಥ, ಲತ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST