Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಣಗಳ ಮಧ್ಯ ನಡೆಯುತ್ತಿರುವ ಸಂಘರ್ಷಕ್ಕೆ ಇತಿಶ್ರೀಗೆ ಒತ್ತಾಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್​ ಚುಗ್​ ಭೇಟಿ ನೀಡಿ  ಬಿಜೆಪಿ ಸದಸ್ಯತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪ್ರಮುಖರ ಸಭೆ ನಡೆಸಿದರು.


ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟು ಬಗ್ಗೆಯೇ ಚರ್ಚೆ ಆಗಿದೆ. ತರುಣ್​ ಚುಗ್​ ಎದುರು ಒಂದಿಷ್ಟು ನಾಯಕರು ಯತ್ನಾಳ್ ಹೆಸರೇಳದೇ ದೂರು ದುಮ್ಮಾನ ತೋಡಿಕೊಂಡಿದ್ದಾರೆ. ಗುಂಪು ಎಂದು ಉಲ್ಲೇಖಿಸಿ ಕ್ರಮಕ್ಕೆ ಜಿಲ್ಲಾಧ್ಯಕ್ಷರ ಆಗ್ರಹಿಸಿದ್ದಾರೆ.

ರಾಜ್ಯಾಧ್ಯಕ್ಷರನ್ನು ಹೈಕಮಾಂಡ್​ ನಾಯಕರು ನೇಮಿಸಿದ್ದಾರೆ. ಯಾರ್ಯಾರಿಗೆ ವ್ಯತ್ಯಾಸ ಇದೆಯೋ ಅವರು ಕುಳಿತುಕೊಂಡು ಮಾತನಾಡಲಿ. ಮಾಧ್ಯಮದ ಎದುರು ಹೋಗಿ ಪ್ರಚಾರ ತೆಗೆದುಕೊಳ್ಳೋದ್ಯಾಕೆ?. ಬಹಿರಂಗ ಮಾತಿನಿಂದ ಪಕ್ಷಕ್ಕೆ ಸಾಕಷ್ಟು ಮುಜುಗರ ಆಗುತ್ತಿದೆ.

ಇದನ್ನ ಸರಿಪಡಿಸಬೇಕು, ಹೀಗೆ ಬಿಟ್ರೆ ಪಕ್ಷಕ್ಕೆ ನಷ್ಟ ಆಗುತ್ತೆ. ಪಕ್ಷ ಸಂಘಟನೆಗೆ ಬೂತ್ ಮಟ್ಟದಲ್ಲೇ ಹೊಡೆತ ಬೀಳುತ್ತದೆ. ರಾಜ್ಯ ನಾಯಕತ್ವದ ವಿರುದ್ಧ ಮಾತಾಡುವುದರಿಂದ ಮುಜುಗರ ಆಗುತ್ತೆ ಎಂದು ತರುಣ್​ ಚುಗ್​ ಎದುರೇ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರ ಬೇಸರ, ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ತರುಣ್​ ಚುಗ್​ ಇದೆಲ್ಲವನ್ನೂ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.

ಸಭೆ ಆರಂಭ ಆಗುತ್ತಿದ್ದಂತೆ ಪಕ್ಷ ಸಂಘಟನೆಗೆ ಸೀಮಿತವಾದ ವಿಷಯಗಳನ್ನಷ್ಟೇ ಮಾತನಾಡುವಂತೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಸೂಚಿಸಿದ್ದಾರೆ. ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಪಕ್ಷದಲ್ಲಿ ಎರಡು ಗುಂಪುಗಳಾಗಿವೆ, ಪಕ್ಷಕ್ಷೆ ಡ್ಯಾಮೇಜ್ ಆಗುತ್ತಿದೆ. ಯತ್ನಾಳ್ ಟೀಮ್ ವಿರುದ್ಧ ಕ್ರಮ ಕೈಗೊಳ್ಳುವುದು ನ್ಯಾಯ.

ಆದರೆ ಇನ್ನೊಂದು ಟೀಮ್ ರೇಣುಕಾಚಾರ್ಯ ‌ಮತ್ತು ಉಳಿದವರೆಲ್ಲಾ ಪ್ರತ್ಯೇಕ ಸಭೆ ಮಾಡಿದ್ದು ಸರಿಯಲ್ಲ ಎಂದು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತರುಣ್ ಚುಗ್ , ಈ ಎಲ್ಲಾ ವಿಚಾರಗಳನ್ನು ‌ನನ್ನೊಂದಿಗೆ ಮಾತನಾಡುವುದು ಬೇಡ ಡಿಸೆಂಬರ್ 7 ರಂದು ರಾಧಾ ಮೋಹನ್ ದಾಸ್ ಬರುತ್ತಾರೆ.

ಅವರ ಜೊತೆ ಮಾತನಾಡಿ. ಬೂತ್ ಸಮಿತಿ ನೇಮಕ ವೇಳೆ ಸಹಮತದಿಂದ ಮಾಡಬೇಕು. ಯಾವುದೇ ಸಮಸ್ಯೆಯಾಗಬಾರದು. ಈಗ ಬೂತ್ ಸಮಿತಿಗಳು ಕೆಲವೆಡೆ ಸಮಸ್ಯೆಗಳಿರುವುದನ್ನೂ ಸರಿಪಡಿಸಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.

ಇದೇ ವೇಳೆ ಜಿಲ್ಲಾ ಘಟಕದ ಅಧ್ಯಕ್ಷರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ವಿಚಾರವಾಗಿ ವರದಿ ಪಡೆದ ತರುಣ್​ ಚುಗ್​, ಅಭಿಯಾನದ ಉಳಿದ ಪ್ರಗತಿ ಬಗ್ಗೆಯೂ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಅಲ್ಲದೇ ಡಿಸೆಂಬರ್ 12ರೊಳಗೆ ಸದಸ್ಯತ್ವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಅಶೋಕ್, ಪಕ್ಷದ ಸಂಘಟನೆ ವಿಚಾರವಾಗಿ 4 ಗಂಟೆ ಕಾಲ ಸಭೆ ಮಾಡಿದ್ದೇವೆ. ಪಕ್ಷದೊಳಗಿನ ಎಲ್ಲಾ ವಿಚಾರಗಳ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಅಸಮಾಧಾನಗಳನ್ನು ಶಮನಗೊಳಿಸುವ ಶಕ್ತಿ ನಮ್ಮ ವರಿಷ್ಠರಿಗಿದೆ. ವಾರದೊಳಗೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ. ನಮ್ಮ ವರಿಷ್ಠರು ಎಲ್ಲವನ್ನೂ ಸರಿಪಡಿಸುವಷ್ಟು ಶಕ್ತರಾಗಿದ್ದಾರೆ. ಪಕ್ಷದಲ್ಲಿ ಎಲ್ಲರೂ ಒಟ್ಟಿಗಿದ್ದೇವೆ ಎಂದರು.

ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮೂವರು ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಪಕ್ಷದ ಸಕ್ರಿಯ ಸದಸ್ಯತ್ವ ಮುಂದುವರಿಸುವ ಬಗ್ಗೆ ಚರ್ಚೆ ಆಗಿದೆ. ಬೂತ್ ಸಮಿತಿ, ಮಂಡಲ ಸಮಿತಿ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದ್ದು, ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಸಲಹೆ ನೀಡಿದ್ದಾರೆ. ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಸಂಘಟನೆ ಬಲಪಡಿಸುವ ಕೆಲಸ ಮಾಡುತ್ತೇವೆ.

ಸಂಘಟನಾ ಪರ್ವ ಇಡೀ ದೇಶದಲ್ಲಿ ನಡೆಯುತ್ತಿದೆ. ಅದಕ್ಕೆ ಸೀಮಿತವಾಗಿ ಸಭೆ ನಡೆದಿದೆ. ಜಿಲ್ಲಾಧ್ಯಕ್ಷರು ಯಾವುದೇ ಮನವಿಯನ್ನು ನಮ್ಮ ರಾಷ್ಟ್ರೀಯ ನಾಯಕರಿಗೆ ಕೊಟ್ಟಿಲ್ಲ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ರಾಜ್ಯದ ಅಧ್ಯಕ್ಷರನ್ನಾಗಿ ನನ್ನ ರಾಷ್ಟ್ರೀಯ ಅಧ್ಯಕ್ಷರು ಘೋಷಣೆ ಮಾಡಿದ್ದಾರೆ.


ಮುಂದಿನ ದಿನಗಳಲ್ಲಿ ಬಿಜೆಪಿ ಸ್ವಂತ ಶಕ್ತಿ ಅಧಿಕಾರಕ್ಕೆ ಬರಬೇಕು. ಇನ್ನು ಹೊಂದಾಣಿಕೆ ರಾಜಕೀಯಕ್ಕೂ ಇತಿಶ್ರೀ ಹಾಡಬೇಕು. ಯತ್ನಾಳ್‌ಗೆ ನೋಟಿಸ್ ಕೊಟ್ಟಾಗಿದೆ. ಕೇಂದ್ರ ವರಿಷ್ಠರು ಗಮನಿಸುತ್ತಿದ್ದು, ಶಿಸ್ತು ಕ್ರಮ ಕೈಗೊಳ್ಳಬೇಕಾ ಅಥವಾ ಸುಮ್ಮನೆ ಇರಬೇಕಾ ಎಂದು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ