Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ-6ರಂದು ಜಗಜ್ಯೋತಿ ಬಸವೇಶ್ವರ ಕಂಚಿನ ಪ್ರತಿಮೆ ಲೋಕಾರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ  ಜಗಜ್ಯೋತಿ  ಬಸವೇಶ್ವರರ 450 ಕೆ.ಜಿ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಏ.6ರಂದು ನಡೆಯಲಿದ್ದು
,ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶ್ರೀ ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿ ಸದಸ್ಯ ಪುಟ್ಟಬಸವರಾಜು ಹೇಳಿದ್ದಾರೆ.

ನಗರದ ಬಸವ ಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ವಚನಗಳ ಮೌಲ್ಯಗಳು  ಹಾಗೂ ಅವರ ಚಿಂತನೆಗಳು ಇಂದಿನ ಪೀಳಿಗೆಗೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬಸವೇಶ್ವರರ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಸಂಭ್ರಮದಿಂದ ನೆರವೇರಲಿದೆ. ಬಸವೇಶ್ವರರ ಸುಸಜ್ಜಿತ ಕಂಚಿನ ಪ್ರತಿಮೆ ನಿರ್ಮಾಣವಾಗಬೇಕೆನ್ನುವುದು 7 ವರ್ಷಗಳ ಬಯಕೆಯಾಗಿದ್ದು, ಈಗ ಅದು ಈಡೇರಿದೆ. ಶ್ರೀ ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಹಾಗೂ ದೇವನಹಳ್ಳಿ ತಾಲೂಕು ವೀರಶೈವ ಸಮಾಜದ ಸಂಘ ಕಾರ್ಯಕ್ರಮದ ನೇತೃತ್ವ ವಹಿಸಿ, ಕಲ್ಲಿನ ಮಂಟಪದ ಮೇಲೆ 450 ಕೆ.ಜಿ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.  ಪ್ರತಿಮೆ ನಿರ್ಮಾಣಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಾ ಈ ಸಮಾರಂಭಕ್ಕೆ ಎಲ್ಲಾ ಸಮುದಾಯದದವರೂ ಸಹ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಸಮಿತಿಯ ಪರವಾಗಿ ಕೋರುತ್ತಿದ್ದೇವೆ ಎಂದರು.

 ಶ್ರೀ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿ, ಪಾಲನಹಳ್ಳಿ ಮಠ ಶ್ರೀ ಸಿದ್ದರಾಜು ಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಆಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅರಣ್ಯ ಹಾಗೂ ಪರಿಸರ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಈಶ್ವರ ಬಿ. ಖಂಡ್ರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಉದ್ಘಾಟಿಸಲಿದ್ದಾರೆ.

ಡಾ.ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯಸ್ವಾಮಿ, ರುದ್ರಮುನಿ ಶಿವಾಚಾರ್ಯಸ್ವಾಮಿ, ಶ್ರೀ ಸಿದ್ಧಲಿಂಗಸ್ವಾಮಿ, ಮಹಾದೇವಸ್ವಾಮಿ, ಶ್ರೀ ಪಟ್ಟದ ಗುರುನಂಜೇಶ್ವರ ಶಿವಾಚಾರ್ಯಸ್ವಾಮಿ ಸೇರಿದಂತೆ ವಿವಿಧ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಕಿಯೋನಿಕ್ಸ್‌ಅಧ್ಯಕ್ಷ ಹಾಗೂ ಶಾಸಕ ಶರತ್‌ಕುಮಾರ್ ಬಚ್ಚೇಗೌಡ, ಸಂಸದ ಡಾ.ಕೆ.ಸುಧಾಕರ್‌, ವಿಧಾನಪರಿಷತ್‌ಸದಸ್ಯ ಎಸ್‌.ರವಿ, ಶಾಸಕರಾದ ಧೀರಜ್‌ಮುನಿರಾಜು, ಎನ್‌.ಶ್ರೀನಿವಾಸ್‌ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ನಿರ್ದೇಶಕ ಆರ್‌.ಎಸ್‌.ಮಂಜುನಾಥ್, ತಾಲೂಕು ಖಜಾಂಚಿ ಟಿ.ಎಸ್‌.ರುದ್ರಪ್ಪ, ನಿರ್ದೇಶಕರಾದ ಜಿ.ವೈ.ಮಲ್ಲಪ್ಪ, ಮಹದೇವಯ್ಯ, ಮುಖಂಡರಾದ ಮೃತ್ಯುಂಜಯ, ಶ್ರೀ ಜಗಜ್ಯೋತಿ ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿ ಸದಸ್ಯ ಎಂ.ಸುಜಯ್‌ಕುಮಾರ್‌ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ