Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೆಸಾರ್ಟ್ ಗಳಾಗಿ ಮಾರ್ಪಟ್ಟ ಕರ್ನಾಟಕದ ಜೈಲುಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಜೈಲುಗಳು ರೆಸಾರ್ಟ್ ಗಳಾಗಿ ಮಾರ್ಪಟ್ಟಿವೆ! ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.


ಜೈಲುಗಳ ಕರ್ಮಕಾಂಡಕ್ಕೆ ಕೊನೆಯೇ ಇಲ್ಲದಂತಾಗಿದೆ. ಒಂದು ಕಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ, ಅತ್ಯಾಚಾರ, ಕೊಲೆ, ದರೋಡೆ ಪ್ರಕರಣಗಳು ಸರಣಿ ರೂಪದಲ್ಲಿ ಘಟಿಸುತ್ತಲೇ ಇದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಅಂಕುಶ ಹಾಕುವ ಬದ್ಧತೆ ಈ ಸರ್ಕಾರಕ್ಕೆ ಇದ್ದಂತಿಲ್ಲ. ದುಷ್ಕರ್ಮಿಗಳು, ದೇಶದ್ರೋಹಿಗಳು ಕ್ರಿಮಿನಲ್ ಕೃತ್ಯಗಳನ್ನು ಎಸಗಲು ಯಾರಿಗೂ ಹೆದರುತ್ತಿಲ್ಲ, ಏಕೆಂದರೆ ಅಪರಾಧ ಎಸಗಿ ಬಂಧನವಾದರೆ ಜೈಲುಗಳಲ್ಲಿ ರಾಜಾತಿಥ್ಯ ಸಿಗುತ್ತದೆ ಎಂಬ ಖಾತ್ರಿ ಅವರಿಗಿದೆ. ಪರಪ್ಪನ ಅಗ್ರಹಾರದಲ್ಲಿ ದೇಶವಿದ್ರೋಹಿ ಉಗ್ರಗಾಮಿಗಳಿಗೆ, ರೇಪಿಸ್ಟ್, ಸ್ಮಗ್ಲರ್ಸ್, ಕೊಲೆಗೆಡುಕರಿಗೆ ವಿಶೇಷ ಸವಲತ್ತು ದೊರೆಯುತ್ತಿದೆ.

"ಕರ್ನಾಟಕ ಕ್ರಿಮಿನಲ್ ಗಳಿಗೆ, ಉಗ್ರರಿಗೆ ಸ್ವರ್ಗ" ಎಂಬುದನ್ನು ಪರಪ್ಪನ ಅಗ್ರಹಾರದ ಜೈಲು ಸಾಕ್ಷೀಕರಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನೈತಿಕತೆ ಇಲ್ಲದ ನಾಚಿಕೆಗೇಡಿತನದ ದುರಾಡಳಿತದ ಪ್ರತಿಫಲನ ಪರಪ್ಪನ ಅಗ್ರಹಾರದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಯಂತವರಿಗೆಉಗ್ರ ಸಂಘಟನೆ ISISಗೆ ಉಗ್ರ ಮನಸ್ಥಿತಿಯ ಯುವಕರನ್ನು ನೇಮಕಮಾಡುತ್ತಿದ್ದ ಜುಹಾದ್ ಹಮೀದ್ ಶಕೀಲ್ ಮನ್ನಾನಿಗೆ ಸಕಲ ಸವಲತ್ತು ನೀಡಿ, ಐಷಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ಕ್ರಮ, ಇದು ಜೈಲು ವ್ಯವಸ್ಥೆ ಹಾಗೂ ಅಧಿಕಾರಿಗಳ ದೇಶದ್ರೋಹದ ಕೃತ್ಯವಾಗಿದೆ.

ಕೂಡಲೇ ರಾಷ್ಟ್ರೀಯ ತನಿಖಾ ದಳ ಇದಕ್ಕೆ ಕಾರಣರಾದ ಜೈಲು ಸಿಬ್ಬಂದಿ, ಅಧಿಕಾರಿಗಳನ್ನು ಬಂಧಿಸಿ ದೇಶ ದ್ರೋಹಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಳ್ಳಲಿ ಎಂದು ಒತ್ತಾಯಿಸುವೆ. ಆತ್ಮಗೌರವ ಇದ್ದರೆ ಗೃಹಸಚಿವರು ಈ ಕೂಡಲೇ ರಾಜಿನಾಮೆ ನೀಡಲಿ, ಬದ್ಧತೆ ನೈತಿಕತೆ ಇದ್ದರೆ ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊರಲಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ದಾವೆ ಹೂಡಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸುರಕ್ಷಿತವಲ್ಲದ ಕರ್ನಾಟಕದಲ್ಲಿ ಸಭ್ಯ ನಾಗರೀಕರು, ಮುಗ್ಧ ಜನತೆ ಬದುಕುವುದೇಗೆ ಎಂಬ ವಾತಾವರಣ ಸೃಷ್ಟಿಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.  ಕಾಂಗ್ರೆಸ್ ಸರ್ಕಾರ ತೊಲಗುವವರೆಗೆ ಅಭಿವೃದ್ಧಿಯೂ ಇಲ್ಲ, ಜನರಿಗೆ ಸುರಕ್ಷತೆಯೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ತೊಲಗಲಿ, ಕರ್ನಾಟಕ ಉಳಿಯಲಿ ಎಂದು ವಿಜಯೇಂದ್ರ ತಾಕೀತು ಮಾಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ