Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ

ಚಂದ್ರವಳ್ಳಿ ನ್ಯೂಸ್, ​ನವದೆಹಲಿ:
ದೇಶದ ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ 'ವಿಕಸಿತ ಭಾರತ'ದ ಸಂಕಲ್ಪಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ.

ಜಲ್ ಜೀವನ್ ಮಿಷನ್ 2.0 ಯೋಜನೆಯಡಿ ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ನಾಗಾಲ್ಯಾಂಡ್ ಸರ್ಕಾರ ನಡುವೆ ನವದೆಹಲಿಯಲ್ಲಿ ಮಹತ್ವದ ಸಾಮರಸ್ಯ ಒಪ್ಪಂದಕ್ಕೆ ಸಹಿ ಹಾಕಲಾಯಿತು.

Advertisement

​ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಪ್ರಮುಖ ಸಭೆಯಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಉಪಸ್ಥಿತರಿದ್ದರು.

​​ಮುಖ್ಯಮಂತ್ರಿಗಳ ಬದ್ಧತೆ: ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಅವರು ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಮೂಲಕ ಪ್ರಧಾನಿ ಮೋದಿಯವರ ಆಶಯವನ್ನು ಈಡೇರಿಸುವುದಾಗಿ ಅವರು ಈ ವೇಳೆ ಬದ್ಧತೆ ವ್ಯಕ್ತಪಡಿಸಿದರು.

​ಒಪ್ಪಂದದ ಉದ್ದೇಶ: ಈ ಒಪ್ಪಂದದ ಮೂಲಕ ನಾಗಾಲ್ಯಾಂಡ್ ರಾಜ್ಯದಲ್ಲಿ ನೀರು ಸರಬರಾಜಿಗೆ ಸಂಬಂಧಿಸಿದಂತೆ ತಾಂತ್ರಿಕ ಬಲವರ್ಧನೆ, ಸಾಮರ್ಥ್ಯ ವೃದ್ಧಿ ಹಾಗೂ ನೀರಿನ ಗುಣಮಟ್ಟದ ಮೇಲ್ವಿಚಾರಣೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು.

​ಜನರ ಭಾಗವಹಿಸುವಿಕೆ: ಯೋಜನೆಯ ಯಶಸ್ಸಿಗಾಗಿ ಸಾರ್ವಜನಿಕರ ಹಾಗೂ ಸಮುದಾಯದ ಭಾಗವಹಿಸುವಿಕೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲು ಈ ಒಪ್ಪಂದದಲ್ಲಿ ಒತ್ತು ನೀಡಲಾಗಿದೆ.

"ವಿಕಸಿತ ಭಾರತ ನಿರ್ಮಾಣದ ಭಾಗವಾಗಿ ದೇಶದ ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸಬೇಕು ಎಂಬ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಸಂಕಲ್ಪದಂತೆ ಜಲ್ ಜೀವನ್ ಮಿಷನ್ 2.0 ಅಡಿಯಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ."
ವಿ. ಸೋಮಣ್ಣ, ಕೇಂದ್ರ ರಾಜ್ಯ ಸಚಿವರು.

​ಈ ಯೋಜನೆಯು ಈಶಾನ್ಯ ರಾಜ್ಯಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ನಾಗರಿಕರ ಜೀವನಮಟ್ಟ ಸುಧಾರಣೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಸಭೆಯಲ್ಲಿ ಆಶಯ ವ್ಯಕ್ತಪಡಿಸಲಾಯಿತು.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು