Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಪಂಗೆ “ಜಲ ಸಂಚಯ್-ಜನ ಭಾಗೀಧಾರಿ” ರಾಷ್ಟ್ರ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳನ್ನು ಉತ್ತಮವಾಗಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ 'ಜಲ ಸಂಚಾಯ್, ಜನ ಭಾಗಿಧಾರಿ' (ಜಿ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಜಿಲ್ಲೆಯು ಭಾಜನವಾಗಿದೆ.


ನವದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದೌಪದಿ ಮುರ್ಮು, ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ನೀಡಿದ ಪ್ರಶಸ್ತಿಯನ್ನು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಸ್ವೀಕರಿಸಿದರು.


ಜಿಲ್ಲೆಯಲ್ಲಿ ಜಲ ಮೂಲದ ಸಂರಕ್ಷಣೆಯಡಿ ಅಂತರ್ಜಲ ವೃದ್ಧಿಗಾಗಿ, ಜಲ ಸಂರಕ್ಷಣೆಗೆ ಅದ್ಯತೆ ನೀಡಲಾಗಿದ್ದು, ಮಳೆ ನೀರು ಸಂರಕ್ಷಣೆ ಕಾಮಗಾರಿ, ಕಂದಕ ಬದು, ಕೆರೆ ಹೂಳೆತ್ತುವುದು, ಕಟ್ಟೆ ಅಭಿವೃದ್ಧಿ, ಕಾಲುವೆ ಅಭಿವೃದ್ಧಿ, ಕಲ್ಯಾಣಿಗಳ ಅಭಿವೃದ್ಧಿ, ಚೆಕ್ ಡ್ಯಾಮ್ ನಿರ್ಮಾಣ, ಇಂಗು ಗುಂಡಿ ಸೇರಿದಂತೆ ಹಲವು ಕಾಮಗಾರಿಗಳಿಂದ ಅಂತರ್ಜಲ ಮಟ್ಟ ಹೆಚ್ಚಲು ಕಾರಣವಾಗಿದೆ.

ಜಿಲ್ಲೆಯಲ್ಲಿ ವಿಶೇಷವಾಗಿ ನರೇಗಾ ಯೋಜನೆಯಡಿ ಅಭಿಯಾನ ಕೈಗೊಂಡು 2024-25ನೇ ಸಾಲಿನಲ್ಲಿ 1063 ಗ್ರಾಮಗಳಲ್ಲಿ 7815 ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ. ಈ ಎಲ್ಲಾ ಕಾಮಗಾರಿಗಳು ಪರಿಣಾಮಕಾರಿಯಾಗಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ರೂ. 25 ಲಕ್ಷ ನಗದು ಸೇರಿದಂತೆ ಈ ಪ್ರಶಸ್ತಿ ಲಭಿಸಿದೆ.


Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ