Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮೈಸೂರು ಸಿಲ್ಕ್ ಉದ್ದಿಮೆ ಉಳಿಸುವ ಹೋರಾಟಕ್ಕೆ ಜಯ-ಅಶೋಕ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಸ್ಥಾಪಿಸಿದ ಮೈಸೂರು ಜಿಲ್ಲೆ ಟಿ. ನರಸೀಪುರದ ಕೆಎಸ್ಐಸಿ ಫಿಲೇಚರ್ ಕಾರ್ಖಾನೆಯ 5 ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಜನವಿರೋಧಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದಾಗಿ ರೇಷ್ಮೆ ಸಚಿವ ಟಿ.ವೆಂಕಟೇಶ್ ಅವರು ಸದನದಲ್ಲಿ ಉತ್ತರ ನೀಡಿದ್ದು, ಇದರಿಂದ ಕರ್ನಾಟಕದ ಅಸ್ಮಿತೆಯಾದ ಕೆಎಸ್ಐಸಿ  ಮೈಸೂರು ಸಿಲ್ಕ್ ಉದ್ದಿಮೆ ಉಳಿಸುವ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಕ್ರೀಡಾಂಗಣದ ನೆಪದಲ್ಲಿ 100 ವರ್ಷಗಳಿಗೂ ಹಳೆಯದಾದ 500 ಮರಗಳನ್ನು ಕಡಿದು, ಶತಮಾನದ ರೇಷ್ಮೆ ಉದ್ಯಮವನ್ನು ಹಾಗೂ ಅಪರೂಪದ ಜೀವವೈವಿಧ್ಯತೆಯನ್ನು ನಾಶಮಾಡಲು ಮುಂದಾಗಿದ್ದ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದ್ದ ಕಾರ್ಖಾನೆಯ ಕಾರ್ಮಿಕರಿಗೆ ಬಿಜೆಪಿ ಬೆಂಬಲಿಸಿತ್ತು. ನಾನು ಖುದ್ದಾಗಿ ಕಾರ್ಖಾನೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೆ ಎಂದು ಅಶೋಕ್ ತಿಳಿಸಿದರು.

ನಮ್ಮ ಹೋರಾಟಕ್ಕೆ ಮಣಿದಿರುವ ಕಾಂಗ್ರೆಸ್ ಸರ್ಕಾರ , ಕನ್ನಡಿಗರ ಅಸ್ಮಿತೆಯಾದ ಕೆಎಸ್ಐಸಿ ಮೈಸೂರು ಸಿಲ್ಕ್ ಉದ್ಯಮವನ್ನು ಅಳಿಸಿ ಹಾಕುವ ದುಸ್ಸಾಹಸದಿಂದ ಹಿಂದೆ ಸರಿದಿರುವುದು ಸ್ವಾಗತಾರ್ಹ.

ಹಲವಾರು ದಶಕಗಳಿಂದ ತನ್ನ ಉತ್ಕೃಷ್ಟ ಗುಣಮಟ್ಟದ ರೇಷ್ಮೆ ಸೀರೆಗಳ ಮೂಲಕ ಜನಪ್ರಿಯತೆ ಕಾಯ್ದುಕೊಂಡು ಲಾಭದಾಯಕವಾಗಿರುವ ಒಂದು ಪಾರಂಪರಿಕ ಸಾರ್ವಜನಿಕ ಉದ್ದಿಮೆಯನ್ನು ಮುಚ್ಚಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕಡೆಗೂ ಜ್ಞಾನೋದಯವಾಗಿದ್ದು ಸಮಾಧಾನದ ವಿಚಾರ. ಇನ್ನು ಮುಂದಾದರೂ ಇಂತಹ ಜನವಿರೋಧಿ, ನಾಡದ್ರೋಹಿ ಕೆಲಸಗಳಿಗೆ ಕೈಹಾಕದೆ ಉತ್ತಮ ಆಡಳಿತ ಕೊಡುವ ಕಡೆ ಗಮನ ಹರಸಲಿ ಎಂದು ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನ ಆಗ್ರಹಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು