Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ ಮಾಡಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟ ಕಾಯ್ದುಕೊಳ್ಳಬೇಕು.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಕೇಳಿದಂತೆ, "ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಲಾಗುವುದು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದು ತಿಳಿಸಿದರು. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.

ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು
, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸಿಎಂ ತಿಳಿಸಿದರು.



ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಎಐಸಿಸಿ  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಡಿ.ಸುಧಾಕರ್, ಸಂಸದರಾದ ರಾಧಾಕೃಷ್ಣ ದೊಡ್ಮನಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ.ಅಜಯ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ