Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ
'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸ್ ಕಿರುಕುಳ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಅವರು ಅಚ್ಚರಿಯ ಧರಣಿ ನಡೆಸಿದರು.
ಶೇಷಾದ್ರಿಪುರ-1ರ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರಿನ ಮೇರೆಗೆ ಜೆಡಿಎಸ್ ಐಟಿ ಸೆಲ್‌ನ ಶಂಕರ್ ಮತ್ತು ಮೋಹನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿದರು. ಯಾವುದೇ ಮುನ್ಸೂಚನೆ ನೀಡದೆ ಪಕ್ಷದ ಕಾರ್ಯಕರ್ತರನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆ ಎಂದು ದೂರಿದ ಅವರು, ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲು ವ್ಯವಸ್ಥಿತ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

Advertisement

ನಂತರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದ ಅವರು, ಕಚೇರಿಯ ಮೆಟ್ಟಿಲುಗಳ ಮೇಲೆಯೇ ಕುಳಿತು ಪ್ರತಿಭಟನೆ ಆರಂಭಿಸಿದರು. ಸ್ಟಿಂಗ್ ಆಪರೇಷನ್‌ನ ನಿಜವಾದ ರೂವಾರಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ ಅವರು, ನನ್ನ ಮೇಲೆಯೇ ನೇರವಾಗಿ ತನಿಖೆ ನಡೆಸಿ ಸತ್ಯ ಹೊರಬರಲಿ ಎಂದು ಪಟ್ಟು ಹಿಡಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತರು, ಪ್ರಕರಣದ ಕುರಿತು ಸಂಪೂರ್ಣ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕ ತನಿಖೆ ನಡೆಸುವುದಾಗಿ ಭರವಸೆ ನೀಡಿದರು.

ಆಯುಕ್ತರ ಭರವಸೆಯ ಬಳಿಕ ಕುಮಾರಸ್ವಾಮಿ ತಮ್ಮ ಧರಣಿಯನ್ನು ಹಿಂಪಡೆದರು. ಅಲ್ಲದೆ, ಮುಂದಿನ ಎರಡು ದಿನಗಳಲ್ಲಿ ಮುಖ್ಯ ಆರೋಪಿಯನ್ನು ಬಂಧಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ ಇಮ್ರಾನ್-ಆಶಾ ಆತ್ಮಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: 11 ಇನ್‌ಸ್ಟಾಗ್ರಾಮ್ ಖಾತೆ ಬಳಕೆದಾರರ ವಿರುದ್ಧ FIRಹಿರಿಯೂರು ತಾಲೂಕಿನ ಮೇಟಿಕುರ್ಕೆಯಲ್ಲಿ ಇಂದು ‘ಸಮಾನತೆಗಾಗಿ ಸಹಭೋಜನ’ ಕಾರ್ಯಕ್ರಮಕೊಡಗಿನ ದಸರಾ; ಕರಗೋತ್ಸವದಿಂದ ಜನೋತ್ಸವದವರೆಗೆ:….ಹನಿಟ್ರ್ಯಾಪ್ ಸಂಚು ಪ್ರಶ್ನಿಸಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರ ಮೇಲೆ ಸರ್ಕಾರದ ದೌರ್ಜನ್ಯ: ಕುಮಾರಸ್ವಾಮಿಜೆಡಿ(ಎಸ್) ಕಾರ್ಯಕರ್ತರ ಗುರಿ: ಪೊಲೀಸ್ ಕಮಿಷನರ್ ಕಚೇರಿ ಮುಂದೆ ಎಚ್.ಡಿ ಕುಮಾರಸ್ವಾಮಿ ಪ್ರತಿಭಟನೆಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರಅಮೆರಿಕದ ಹಿಂದೂ ದೇವಾಲಯದ ಮೇಲೆ ಸಾಮೂಹಿಕ ಗುಂಡಿನ ದಾಳಿಗೆ ಸಂಚು: 19 ವರ್ಷದ ಯುವಕ ಬಂಧನಧಾರ್ಮಿಕ ಮತಾಂತರಕ್ಕೆ ಸಿಗಲ್ಲ ಜಾತಿ ಮೀಸಲಾತಿ: ಸುಪ್ರೀಂ ಕೋರ್ಟ್ಹಾಲಿವುಡ್ ಗಾಯಕಿ ಮೇರಿ ಮಿಲ್‌ಬೆನ್ ಸ್ಫೋಟಕ ಆರೋಪ: ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಅಮೆರಿಕದಿಂದ ಹಣಕಾಸು ನೆರವು!ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಮೇರಿ ಮಿಲ್ಬೆನ್ ಎಚ್ಚರಿಕೆ