Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್-ಬಿಜೆಪಿ ಹೋರಾಟದಲ್ಲಿ ಗೊಂದಲವಿಲ್ಲ-ಹೆಚ್.ಡಿ ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಸ್ಲಿಮರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಕರ್ನಾಟಕ ಬಿಜೆಪಿ  ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ NDA 'ಸಮನ್ವಯ ಸಮಿತಿ' ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಕುಮಾರಸ್ವಾಮಿ ತಿಳಿಸಿದೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ 'ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ'ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಭಾರತೀಯ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಜೆಡಿಎಸ್ - ಬಿಜೆಪಿ ಪಕ್ಷಗಳು ಈಗಾಗಲೇ  ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್ ಅಚಲ ನಿಲುವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ