Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬರ ಪರಿಹಾರ ಹಾಗೂ ಪಕ್ಷ ಸಂಘಟನೆಗೆ ಜೆಡಿಎಸ್ ಬ್ಲೂಪ್ರಿಂಟ್: ಜೆ.ಪಿ. ಭವನದಲ್ಲಿ ಕೋರ್ ಕಮಿಟಿ ಮಹತ್ವದ ಸಭೆ

​ ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯ ಪಕ್ಷದ ಮುಖ್ಯ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಪ್ರಮುಖರ ಮಹತ್ವದ ಸಭೆ ನಡೆಯಿತು. 

​ರಾಜ್ಯದಲ್ಲಿ ತಲೆದೂರಿರುವ ಭೀಕರ ಬರ ಪರಿಸ್ಥಿತಿ, ರೈತರ ಸಂಕಷ್ಟಗಳು ಹಾಗೂ ಪಕ್ಷದ ಸಾಂಸ್ಥಿಕ ಬಲವರ್ಧನೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಮುಂದಿನ ಹೋರಾಟದ ಹಾದಿಯ ಬಗ್ಗೆ ಕಾರ್ಯತಂತ್ರ ರೂಪಿಸಲಾಯಿತು.

Advertisement

​ಸಭೆಯ ಪ್ರಮುಖ ನಿರ್ಧಾರ ಹಾಗೂ ಚರ್ಚೆಗಳು:  ​ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆ:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎದುರಾಗಿರುವ ತೀವ್ರ ಬರಗಾಲದಿಂದಾಗಿ ರೈತರು ಮತ್ತು ಸಾರ್ವಜನಿಕರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಸಭೆಯಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಲಾಯಿತು.

​ಜನಪರ ಹೋರಾಟಕ್ಕೆ ಕರೆ: ಸಂಕಷ್ಟದಲ್ಲಿರುವ ಜನರ ಮತ್ತು ರೈತರ ಧ್ವನಿಯಾಗಿ ಜೆಡಿಎಸ್ ಪಕ್ಷವು ಬೀದಿಗಿಳಿದು ಹೋರಾಟ ನಡೆಸಲು ತೀರ್ಮಾನಿಸಿತು. 

​ಸಂಘಟನೆ ಬಲವರ್ಧನೆ: ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ಪ್ರಮುಖ ಕಾರ್ಯತಂತ್ರಗಳನ್ನು ರೂಪಿಸಲಾಯಿತು. 

​ಈ ಮಹತ್ವದ ಸಭೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಮಾಜಿ ಶಾಸಕ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಕ್ಷದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ್, ಕೆ. ಶ್ರೀನಿವಾಸಮೂರ್ತಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಗೊಟ್ಟಿಗೆರೆ ಮಂಜುನಾಥ್ ಸೇರಿದಂತೆ ಕೋರ್ ಕಮಿಟಿಯ ಪದಾಧಿಕಾರಿಗಳು, ವಿವಿಧ ಜಿಲ್ಲೆ ಮತ್ತು ತಾಲೂಕುಗಳ ಅಧ್ಯಕ್ಷರು ಹಾಗೂ ಹಿರಿಯ ನಾಯಕರು ಉಪಸ್ಥಿತರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ