ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಬೆಂಗಳೂರು ಉತ್ತರ ನಗರ ಜಿಲ್ಲೆ ವ್ಯಾಪ್ತಿಯ ಪ್ರಮುಖ ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಏಜೆಂಟ್‌ಗಳ ಮಹತ್ವದ ಕಾರ್ಯಾಗಾರವೊಂದು ಯಶಸ್ವಿಯಾಗಿ ಜರುಗಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಡೆದ ಈ ಕಾರ್ಯಾಗಾರವನ್ನು ಯಲಹಂಕ, ದಾಸರಹಳ್ಳಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಾಯಕರಿಗೆ ಹಾರ್ದಿಕ ಅಭಿನಂದನೆ:
ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಜೆಡಿಎಸ್‌ನ ಪ್ರಮುಖ ನಾಯಕರುಗಳಿಗೆ ಪಕ್ಷದ ಪರವಾಗಿ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶಗೌಡ, ಮಾಜಿ ಶಾಸಕರು ಹಾಗೂ ಬೆಂಗಳೂರು ಉತ್ತರ ನಗರ ಜಿಲ್ಲಾಧ್ಯಕ್ಷ ಇ. ಕೃಷ್ಣಪ್ಪ, ಹೆಚ್.ಎನ್. ದೇವರಾಜ್ ಸೇರಿದಂತೆ ಮತ್ತಿತರ ಮುಖಂಡರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಬೂತ್ ಮಟ್ಟದ ಏಜೆಂಟ್‌ಗಳಿಗೆ ಅಗತ್ಯ ಮಾಹಿತಿ ಹಾಗೂ ತರಬೇತಿ ನೀಡಿದರು.
ಕಾರ್ಯಕರ್ತರಿಗೆ ಧನ್ಯವಾದಗಳು:
ಮತದಾರರ ಪಟ್ಟಿ ಪರಿಷ್ಕರಣೆಯಂತಹ ಪ್ರಮುಖ ಪ್ರಕ್ರಿಯೆಯಲ್ಲಿ ಪಕ್ಷದ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಪಕ್ಷದ ನೂರಾರು ಮುಖಂಡರು, ಪದಾಧಿಕಾರಿಗಳು ಹಾಗೂ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರಿಗೆ ಜೆಡಿಎಸ್ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗಿದೆ.



