LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುರ್ಜೇವಾಲಾರನ್ನು ‘ಮಿಸ್ಟರ್ ವಸೂಲಿವಾಲಾ’ ಎಂದು ಟೀಕಿಸಿದ ಜೆಡಿಎಸ್

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು
, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸುರ್ಜೇವಾಲಾ ಅವರನ್ನು ಮಿಸ್ಟರ್ ವಸೂಲಿವಾಲಾಎಂದು ಜರೆದಿರುವ ಜೆಡಿಎಸ್, “ನಿಮ್ಮದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆಎಂದು ಆಕ್ರೋಶ ವ್ಯಕ್ತಪಡಿಸಿದೆ.

​ಜೆಡಿಎಸ್ ಕುರಿತು ಮಾತನಾಡುವ ಮುನ್ನ ಕಾಂಗ್ರೆಸ್ ತನ್ನ ಕರಾಳ ಇತಿಹಾಸವನ್ನು ಒಮ್ಮೆ ನೆನಪಿಸಿಕೊಳ್ಳಬೇಕು ಎಂದು ಎಚ್ಚರಿಸಿರುವ ಪಕ್ಷವು, ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳಿಗೆ ಹಾಗೂ ತನ್ನದೇ ಹಿರಿಯ ನಾಯಕರಿಗೆ ಮಾಡಿದ ದ್ರೋಹದ ಪಟ್ಟಿಯನ್ನು ಬಿಡುಗಡೆ ಮಾಡಿದೆ.

​​ದೇವೇಗೌಡರಿಗೆ ಮಹಾದ್ರೋಹ: 1997ರಲ್ಲಿ ಕುತಂತ್ರದ ಮೂಲಕ ಹೆಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದು ಕಾಂಗ್ರೆಸ್ ಪಕ್ಷ. ಈ ಮಹಾದ್ರೋಹವನ್ನು ಕಳೆದ 30 ವರ್ಷಗಳಿಂದ ಕನ್ನಡಿಗರು ಪ್ರಶ್ನಿಸುತ್ತಲೇ ಇದ್ದಾರೆ, ಇದಕ್ಕೆ ಕಾಂಗ್ರೆಸ್ ಉತ್ತರಿಸಲಿ.

​ಮೈತ್ರಿ ಸರಕಾರದ ಬೆನ್ನಿಗೆ ಚೂರಿ: 2019ರಲ್ಲಿ ರಾಜ್ಯದಲ್ಲಿ ಮೈತ್ರಿ ನಾಟಕವಾಡಿ, ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿ ಸರ್ಕಾರ ಉರುಳಿಸಿದ್ದೂ ಇದೇ ಕಾಂಗ್ರೆಸ್.

​ಸ್ವಪಕ್ಷದ ನಾಯಕರಿಗೇ ಅಪಮಾನ: ಮಾಜಿ ಪ್ರಧಾನಿಗಳಾದ ಪಿ.ವಿ. ನರಸಿಂಹರಾವ್ ಹಾಗೂ ಡಾ. ಮನ್ಮೋಹನ್ ಸಿಂಗ್ ಅವರಂತಹ ಶ್ರೇಷ್ಠ ನಾಯಕರನ್ನು ಕಾಂಗ್ರೆಸ್‌ನ ನಕಲಿ ಗಾಂಧಿಕುಟುಂಬ ಹೇಗೆ ಅಪಮಾನಿಸಿ, ನಡೆಸಿಕೊಂಡಿತು ಎಂಬುದು ಇಡೀ ದೇಶಕ್ಕೆ ಗೊತ್ತಿದೆ.

​ಅವಕಾಶವಾದಿ ರಾಜಕಾರಣ: ತಮಿಳುನಾಡಿನಲ್ಲಿ ಡಿಎಂಕೆಯೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡು, ಫಲಿತಾಂಶ ಬಂದ ಬಳಿಕ ಗೆದ್ದೆತ್ತಿನ ಬಾಲ ಹಿಡಿಯುವ ನೀತಿಗೆಟ್ಟ ರಾಜಕಾರಣ ಕಾಂಗ್ರೆಸ್‌ನದ್ದು. ಇಂತಹ ಪಕ್ಷಕ್ಕೆ ಜೆಡಿಎಸ್ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ.

​"ದೇವೇಗೌಡರ ವಿಷಯದಲ್ಲಿ ರಾಜಕೀಯ ಮಾಡುವುದು ನೀಚತನ"
​"ದೇವೇಗೌಡರು ರಾಷ್ಟ್ರ ಕಂಡ ಮೇರು ನಾಯಕರು. ಕನ್ನಡಿಗರ ಹೆಮ್ಮೆಯ ಏಕೈಕ ಪ್ರಧಾನಿ ಹಾಗೂ ಇಮ್ಮಡಿ ಪುಲಕೇಶಿಯ ನಂತರ ಭರತಭೂಮಿಯನ್ನು ಆಳಿದ ಶ್ರೇಷ್ಠ ನಾಯಕ. ಆ ಹಿರಿಯ ಜೀವದ ವಿಷಯದಲ್ಲಿ ರಾಜಕೀಯ ಮಾಡುವುದು ಕಾಂಗ್ರೆಸ್‌ನ ನೀಚತನದ ಪರಾಕಾಷ್ಠೆ" ಎಂದು ಜೆಡಿಎಸ್ ತೀವ್ರವಾಗಿ ಖಂಡಿಸಿದೆ.

​ಕಾಂಗ್ರೆಸ್ ಪಕ್ಷದ್ದು ಒಳಗೆ ಜಾತ್ಯತೀತತೆಯ ಮುಖವಾಡ, ಹೊರಗೆ ಜಾತಿ ವಿದ್ವೇಷದ ರಾಜಕಾರಣ ಎಂದು ಟೀಕಿಸಿರುವ ಜೆಡಿಎಸ್, "ಮೊದಲು ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡಿಕೊಳ್ಳಿ. ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಕೇವಲ ವಸೂಲಿಯಲ್ಲಿ ತೊಡಗಿರುವ ಸುರ್ಜೇವಾಲಾ ಅವರು ದೇವೇಗೌಡರ ವಿಷಯ ಬಿಟ್ಟು, ತಮ್ಮ ಸ್ವಪಕ್ಷ ಹಾಗೂ ಸರ್ಕಾರದಲ್ಲಿ ನಡೆಯುತ್ತಿರುವ ಒಳಜಗಳ ಮತ್ತು ಒಳಸಂಚುಗಳನ್ನು ಹತ್ತಿಕ್ಕುವ ಕಡೆ ಗಮನ ಹರಿಸಲಿ" ಎಂದು ಜೆಡಿಎಸ್ ತಿರುಗೇಟು ನೀಡಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'