LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚೆನ್ನಮ್ಮ ದೇವೇಗೌಡರ ನಿಧನಕ್ಕೆ ಹಿರಿಯೂರಿನ ಜೆಡಿಎಸ್ ಮುಖಂಡರಿಂದ ತೀವ್ರ ಸಂತಾಪ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನಕ್ಕೆ ಜೆಡಿಎಸ್ ಹಿರಿಯ ಮುಖಂಡರಾದ ಎಂ. ರವೀಂದ್ರಪ್ಪ
, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪಿಲಾಜನಹಳ್ಳಿ ಎಂ. ಜಯಣ್ಣ ಹಾಗೂ ಜೆಡಿಎಸ್ ಮುಖಂಡ ಹೆಚ್. ನಾಗರಾಜ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಮಂಜುನಾಥ್  ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಚೆನ್ನಮ್ಮನವರ ಅಗಲಿಕೆ ತಮಗೆ ತುಂಬಾ ನೋವಿನ ಸಂಗತಿಯಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರವರ ಕುಟುಂಬದಲ್ಲಿ ಚೆನ್ನಮ್ಮನವರು ಕೇವಲ ಪತ್ನಿಯಾಗಿರದೆ, ಇಡೀ ಕುಟುಂಬಕ್ಕೆ ದೊಡ್ಡ ಮಾರ್ಗದರ್ಶಕರಾಗಿದ್ದರು. ಸರಳತೆ ಹಾಗೂ ಕೌಟುಂಬಿಕ ಮೌಲ್ಯಗಳಿಗೆ ಪ್ರತಿರೂಪವಾಗಿದ್ದ ಅವರು, ತಮ್ಮ ಶಿಸ್ತುಬದ್ಧ ಬದುಕಿನ ಮೂಲಕ ಇತರರಿಗೆ ಸದಾ ಮಾದರಿಯಾಗಿದ್ದರು ಎಂದು ಮುಖಂಡರು ಸ್ಮರಿಸಿದ್ದಾರೆ.

 ಅವರ ನಿಧನದಿಂದ ಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಜೆಡಿಎಸ್‌ನ ಲಕ್ಷಾಂತರ ಕಾರ್ಯಕರ್ತರಿಗೂ ತುಂಬಲಾರದ ನಷ್ಟ ಉಂಟಾಗಿದೆ. ಈ ತೀವ್ರ ದುಃಖದಲ್ಲಿ ತಾವೂ ಭಾಗಿಗಳಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖಂಡರು ಜಂಟಿ ಪ್ರಕಟಣೆಯಲ್ಲಿ ಪ್ರಾರ್ಥಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ