Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಪಕ್ಷದ ಸಂಘಟನೆ, ಸದಸ್ಯತ್ವ ನೋಂದಣಿಗೆ ಚಾಲನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರದಲ್ಲಿ ಪಕ್ಷದ ಸಂಘಟನೆ
, ಸದಸ್ಯತ್ವ ನೋಂದಣಿ ಹಾಗೂ ಸಾಂಸ್ಥಿಕ ಚುನಾವಣೆಯ ಬಗ್ಗೆ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಚ್. ಎಂ. ರಮೇಶ್ ಗೌಡರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರುಗಳ ಸಭೆ ನಡೆಯಿತು.

ಈ ಸಭೆಯಲ್ಲಿ  ಬೆಂಗಳೂರು ನಗರದ ಜಿಲ್ಲಾ ಚುನಾವಣಾಧಿಕಾರಿ ಶೈಲಾ ಸಂತೋಜಿ ರಾವ್, ಯಲಹಂಕ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವೇಣುಗೋಪಾಲ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಮಾಜಿ ನಗರ ಪಾಲಿಕೆ  ಸದಸ್ಯರಾದ ಎಂ. ಮುನಿಸ್ವಾಮಪ್ಪ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ವಿ. ನಾಗೇಶ್ವರ ರಾವ್, ಬೆಂಗಳೂರು ನಗರ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಂ. ವೆಂಕಟಸ್ವಾಮಿ,

ವಿಜಯನಗರ ಕ್ಷೇತ್ರದ ಅಧ್ಯಕ್ಷ ಪ್ರಕಾಶ್ ಗೌಡ, ಬೊಮ್ಮನಹಳ್ಳಿ ಕ್ಷೇತ್ರದ ಅಧ್ಯಕ್ಷ ಬಿ ಎಸ್ ಗಣೇಶ್, ಪುಲಕೇಶಿ ನಗರ ಕ್ಷೇತ್ರದ ಅಧ್ಯಕ್ಷ ಸೈಯದ್ ತಹಸಿನ್, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅಧ್ಯಕ್ಷ ಎಂ ಚಂದ್ರೇಗೌಡ, ಸರ್ವಜ್ಞ ನಗರ ಕ್ಷೇತ್ರದ ಅಧ್ಯಕ್ಷ ಟಿ ಶಿವಕುಮಾರ್ ಅವರು ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳು ಮತ್ತು ವಿವಿಧ ವಿಭಾಗಗಳ ಅಧ್ಯಕ್ಷರುಗಳಾದ ಎಂ ಗೋಪಾಲ್ (ಕಾರ್ಮಿಕ ವಿಭಾಗ), ಆರ್ ಸ್ಯಾಮುಯಲ್ (ಯುವ ಜನತಾದಳ), ವಿ. ಜನಾರ್ಧನ್ (ಪರಿಶಿಷ್ಟ ಜಾತಿ ವಿಭಾಗ), ತಿಮ್ಮೇಗೌಡ (ಸಾರಿಗೆ ವಿಭಾಗ), ಅಫ್ರೋಜ್ ಬೇಗ್ (ಅಲ್ಪಸಂಖ್ಯಾತರ ವಿಭಾಗ) ಸೇರಿದಂತೆ ಎಲ್ಲಾ ವಿಭಾಗಗಳ ಅಧ್ಯಕ್ಷರುಗಳು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ