Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಿದೆ-ಎಸ್. ಎಂ. ಹರೀಶ್ ಗೌಡ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕ ಅಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಯಾಗಿದ್ದು ೨೫ ವರ್ಷಗಳನ್ನು ಪೂರೈಸಿದೆ. ಈ ನಿಟ್ಟಿನಲ್ಲಿ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಜಿಲ್ಲಾ ಹಾಗೂ ತಾಲ್ಲೂಕು ಪ್ರಮುಖರ ಸಹಕಾರದೊಂದಿಗೆ ಮೇ ೦೮ರಂದು ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಜತ ಮಹೋತ್ಸವ(ಜೆಡಿಎಸ್ ಪಕ್ಷದ ಬೆಳ್ಳಿಹಬ್ಬ )ವನ್ನು ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ರಾಜ್ಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಅಧ್ಯಕ್ಷ ಎಸ್ ಎಂ ಹರೀಶ್ ಗೌಡ ತಿಳಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಜೆಡಿಎಸ್ ಪಕ್ಷ ಕಳೆದ ೨೫ವರ್ಷಗಳಿಂದ ನಿರಂತರ ಜನಸಂಪರ್ಕದಲ್ಲಿದ್ದು ತನ್ನದೇಆದ  ಶಕ್ತಿ ಹೊಂದಿದೆ. ಕಾರ್ಯಕರ್ತರ ಬೆಂಬಲದಿಂದ ಸಾಲು ಸಾಲು ಚುನಾವಣೆ ಎದುರಿಸಿದ್ದು ಗೆಲುವು ಸೋಲು ಎರಡನ್ನು ಕಂಡಿದ್ದೇವೆ. ನಮ್ಮ ಪಕ್ಷವನ್ನು ರಾಷ್ಟ್ರಿಯ ಪಕ್ಷಗಳು  ಸದಾ ವಿರೋಧಿಸಿಕೊಂಡು ಬಂದಿವೆ.

ನಮ್ಮ ಪಕ್ಷದ ಸೋಲು ಕಾರ್ಯಕರ್ತರಲ್ಲಿ ಎಂದಿಗೂ ಉತ್ಸಹ ಕಡಿಮೆ ಮಾಡಿಲ್ಲ. ಜಿಲ್ಲೆ ಹಾಗೂ ತಾಲ್ಲೂಕಿನ ಕಾರ್ಯಕರ್ತರ ಸಲುವಾಗಿ ಮೇ ೦೮ರಂದು ತಾಲ್ಲೂಕಿನಲ್ಲಿ ರಜತ ಮೊಹೋತ್ಸವ(ಬೆಳ್ಳಿ ಹಬ್ಬ )ಕಾರ್ಯಕ್ರಮವನ್ನು  ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ ಬೆಳ್ಳಿ ಹಬ್ಬದ ಮಹೋತ್ಸವವು ಮೇ ೦೮ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮಕ್ಕೆ ಆಗಮಿಸಲಿರುವ ರಾಜ್ಯ ಜೆಡಿಎಸ್ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿಯವರನ್ನು ಬೃಹತ್ ಬೈಕ್ ರ್ಯಾಲಿ ಮೂಲಕ ಸ್ವಾಗತಿಸಲಿದ್ದೇವೆ. ಕಾರ್ಯಕ್ರಮವು ವಿಶೇಷವಾಗಿದ್ದು  ರಾಜ್ಯ ಪ್ರಮುಖರು ನೇರವಾಗಿ ಕಾರ್ಯಕರ್ತರ ಜೊತೆ ಸಂವಾದ ನಡೆಸಲಿದ್ದಾರೆ ಎಂದರು.

ನಗರಸಭಾ ಸದಸ್ಯ ತ.ನ. ಪ್ರಭುದೇವ್ ಮಾತನಾಡಿ ಮೇ ೦೮ರಂದು ತಾಲ್ಲೂಕಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಕಾರ್ಯಕ್ರಮಕ್ಕೆ ಇಂದು ಪೂಜೆ ಮಾಡುವ ಮೂಲಕ  ವೇದಿಕೆಗೆ ಚಾಲನೆ ನೀಡಿದ್ದೇವೆ.

ಪಂಚ ರಾಜ್ಯಗಳ ಫಲಿತಾಂಶ ನಮಗೆ ಸ್ಫೂರ್ತಿಯಾಗಿದ್ದು ಮುಂದೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷವಾಗಿದ್ದು  ಈ ಬಾರಿ ನಿಖಿಲ್ ಕುಮಾರಸ್ವಾಮಿಯವರಿಗೆ ಶಕ್ತಿ ತುಂಬುವ ಕೆಲಸ ರಾಜ್ಯದ ಜೆಡಿಎಸ್ ಸೇನಾನಿಗಳು ಮಾಡಲಿದ್ದಾರೆ.ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ  ನವ ಚೈತನ್ಯ ಮೂಡಿಸುವ  ಸಲುವಾಗಿ ರಾಜ್ಯ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. 

ಸುದ್ದಿ ಗೋಷ್ಠಿಯಲ್ಲಿ  ಡಾ. ವಿಜಯ್ ಕುಮಾರ್,ಅಂಜನ್ ಗೌಡ, ಮಾಜಿ ನಗರ ಸಭಾ ಸದಸ್ಯ ಜಿ. ಸತ್ಯನಾರಾಯಣ,ತಳವಾರ ನಾಗರಾಜ್, ಕೊನಘಟ್ಟ ಆನಂದ್,  ಅಶ್ವಥ್ , ಕೆಂಪರಾಜು, ನಾಗರಾಜ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’