ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಇದೇ ಅಕ್ಟೋಬರ್ 25ರಂದು ಭಾನುವಾರ ಮಧ್ಯಾಹ್ನ 12ಕ್ಕೆ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ, 01-11-2025 ರಿಂದ 30-09-2026ರ ಅವಧಿಯಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾದ ಸಮುದಾಯದ ಅಧಿಕಾರಿಗಳು ಹಾಗೂ ನೌಕರರನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಗುವುದು.
ಸಮಾರಂಭದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಸಮುದಾಯದ ಮುಖಂಡರು, ವಿದ್ಯಾರ್ಥಿಗಳ ಪೋಷಕರು ಮತ್ತು ನಿವೃತ್ತ ನೌಕರರ ಕುಟುಂಬದವರು ಪಾಲ್ಗೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ ಜಿ.ಹೆಚ್. ತಿಪ್ಪಾರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



