Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಫೆ. 27ರಂದು ಉದ್ಯೋಗ ಮೇಳ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಫೆಬ್ರವರಿ
27 ರಂದು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ "ಉದ್ಯೋಗಮೇಳ" ಆಯೋಜಿಲಾಗಿದ್ದು ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುತ್ತಿದ್ದು ಉದ್ಯೋಗಮೇಳದಲ್ಲಿ ಅಂದಾಜು 75ಕ್ಕಿಂತ ಹೆಚ್ಚು ನಿಯೋಜಕರು/ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ 3000ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು QR Code : ಅಥವಾ https://bangalorerural.nic.in ಬಳಸಿಕೊಂಡು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನವು ಕೂಡ "ಅಭ್ಯರ್ಥಿಗಳ ನೋಂದಣಿ ಕೌಂಟರ್" ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು.

10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ