Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕೋದ್ಯಮದ ಬೆನ್ನುಮೂಳೆ ಪತ್ರಿಕಾ ವಿತರಕರು-ಏಜೆಂಟರು: ಕೆ.ವಿ.ಪ್ರಭಾಕರ್

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ.  (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಅಸಂಘಟಿತವಾಗಿಯೇ ಉಳಿದಿದ್ದ ವಿತರಕ‌ಸಮುದಾಯ ಒಟ್ಟಿಗೇ ಸಂಘಟಿತರಾಗುವ ಅನಿವಾರ್ಯತೆ ಸೃಷ್ಟಿಯಾಗಿದ್ದು ಕೋವಿಡ್ ಸಮಯದಲ್ಲಿ.

ಸದಾ ಪತ್ರಿಕಾ ಸಂಸ್ಥೆಗಳ ಪಾಲಿಗೆ ಅನಾಥ ರಕ್ಷಕರಾಗುವ ವಿತರಕರು, ಕೋವಿಡ್ ಸಂದರ್ಭದಲ್ಲಿ ತಾವೇ ಸ್ವತಃ ಅನಾಥರಾದರು. ಈ ಹೊತ್ತಲ್ಲಿ ಶಂಬುಲಿಂಗ ಅವರು ವಿತರಕರ ಸಂಘ ಮತ್ತು ಸಂಘಟನೆಗೆ ಜೀವ ತುಂಬಿದರು ಎಂದು ಮೆಚ್ಚುಗೆ ಸೂಚಿಸಿದರು.

ಸಂಘಟನೆ ಮೊದಲ ಹೆಜ್ಜೆ. ಸಂಘಟನೆ ಬೆನ್ನ ಹಿಂದೆಯೇ ನಿಮ್ಮ ಹಕ್ಕುಗಳಿಗೂ ಜೀವ ಬರುತ್ತದೆ. ಬಳಿಕ ಸರ್ಕಾರದ ಸವಲತ್ತುಗಳು ನಿಮ್ಮ ಹಕ್ಕು ಆಗಿ ಒಂದೊಂದಾಗಿ ಜಾರಿ ಆಗುತ್ತವೆ. ಜೊತೆಗೆ ಕೆಲಸದ ಅಭದ್ರತೆಯೂ ಕಡಿಮೆ ಆಗುತ್ತದೆ ಎಂದರು.

ವಿತರಕ ಸಮುದಾಯದ ಪರವಾಗಿ ಈ ಸಮ್ಮೇಳನದಲ್ಲಿ ಕೆಲವೊಂದು ಬೇಡಿಕೆಗಳನ್ನು ಇಡಲಾಗಿದೆ. ಅವೆಲ್ಲವನ್ನೂ ಪರಿಶೀಲಿಸಿ, ಹಂತ ಹಂತವಾಗಿ ಕ್ರಮ ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಚಿಸುತ್ತೇನೆ.

ಪತ್ರಿಕಾ ವಿತರಕರಿಗೆ ಸರ್ಕಾರದ ಸವಲತ್ತುಗಳು ಸಿಗಬೇಕು ಎನ್ನುವುದು ಒಂದು‌ಕಡೆ ಇರಲಿ. ಜೊತೆಗೆ ಪತ್ರಿಕಾ ಸಂಸ್ಥೆಗಳೂ, ಇನ್ನಿತರೆ ಉದ್ಯಮಿಗಳ ಮೂಲಕ CSR ನಿಧಿಯಿಂದ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ಅವಕಾಶಗಳೂ ಇವೆ. ಈ ದಿಕ್ಕಿನಲ್ಲೂ‌ಗಮನ ಹರಿಸುವ ಅಗತ್ಯವಿದೆ ಎಂದರು.‌

ಸುತ್ತೂರು ಶ್ರೀ ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷ ಶಂಬುಲಿಂಗ ಅವರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ