Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತ ಚನ್ನಬಸವಯ್ಯ ಅಕಾಲಿಕ ಮರಣಕ್ಕೆ ತುತ್ತು: ವೈದ್ಯಕೀಯ ಕಾಲೇಜಿಗೆ ದೇಹದಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಳಲ್ಕೆರೆ ರಸ್ತೆಯ ನೆಹರು ನಗರ ನಿವಾಸಿ
, ಪತ್ರಕರ್ತ ಚನ್ನಬಸವಯ್ಯ(46) ಗುರುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚನ್ನಬಸವಯ್ಯ ಅವರ ಇಚ್ಚೆಯಂತೆ, ಪಾರ್ಥೀವ ಶರೀರವನ್ನು ನಗರದ ಬಸವೇಶ್ವರ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾನವಾಗಿ ನೀಡಲಾಯಿತು.

ಪತ್ರಿಕೋದ್ಯಮ ಹಾಗೂ ಕಾನೂನು ಪದವಿ ಪಡೆದಿದ್ದ ಚನ್ನಬಸಯ್ಯ ಆಕಾಶವಾಣಿ, ಡಿಡಿ ವಾಹಿನಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಮೇ.28 ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ತಾಯಿ, ಸಹೋಧರ ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.

 ಪತ್ರಕರ್ತರ ಸಂಘದಿಂದ ಸಂತಾಪ:
ನಗರದ ಪತ್ರಿಕಾ ಭವನದಲ್ಲಿ ಮೃತ ಚನ್ನಬಸವಯ್ಯ ಅವರ ಅಗಲಿಕೆ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ ಸಭೆ ನಡೆಯಿತು.

ಈ ವೇಳೆ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್‌ ಮಾತನಾಡಿ, ಚನ್ನಬಸಯ್ಯ ಅವರು ಸುದ್ದಿಗಳ ವಿಚಾರದಲ್ಲಿ ಎಂದೂ ಮೈ ಮರೆಯುತ್ತಿರಲಿಲ್ಲ ಎಂದು ಸ್ಮರಿಸಿದರು. ತಮ್ಮ ವೃತ್ತಿ ಬದುಕಿನ ಜೊತೆಗೆ ಬದುಕಿನಲ್ಲೂ ಸಾರ್ಥಕತೆ ಮೂಡುವ ಕೆಲಸ ಮಾಡಿರುವುದು ಅವರ ಸಾವಿನಲ್ಲಿ ಗೊತ್ತಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ದೇಹದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್‌ ಗೌಡಗೆರೆ ಮಾತನಾಡಿ, ಪತ್ರಕರ್ತರ ಸಂಘದ ಸದ್ಯರಾಗಿದ್ದ ಚನ್ನಬಸವಯ್ಯ ಅವರ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.



ಹಿರಿಯ ಪತ್ರಕರ್ತ ಶ.ಮಂಜುನಾಥ್‌ ಮಾತನಾಡಿ, ಕಾನೂನು ಪದವಿ ಪಡೆದು, ಪತ್ರಕೋದ್ಯಮಕ್ಕೂ ಬಂದ ಚನ್ನಬಸವಯ್ಯ ಆರಂಭದಲ್ಲಿ ಬಹಳ ನಿಷ್ಠುರವಾಗಿ ನಡೆದುಕೊಳ್ಳುತ್ತಿದ್ದರು. ಆದರೆ, ಕಳೆದ ಆರು ತಿಂಗಳಿಂದ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿ ಮಾಗಿದಂತೆ ಕಂಡು ಬರುತ್ತಿದ್ದರು ಎಂದು ಸ್ಮರಿಸಿದರು.

ಪತ್ರಕರ್ತರಾದ ಎಂ.ಎನ್‌.ಅಹೋಬಲಪತಿ, ತಿಪ್ಪೇಸ್ವಾಮಿ ನಾಕೀಕೆರೆ, ರಾಜಶೇಖರ್‌, ಮಾಲತೇಶ್‌ ಅರಸ್‌ ಮಾತನಾಡಿದರು. ಚನ್ನಬಸವಯ್ಯ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಹರಿಯಬ್ಬೆ ಹೆಂಜಾರಪ್ಪ, ಬ್ರಹ್ಮಗಿರಿ ಶ್ರೀನಿವಾಸ್‌, ಗೌನಹಳ್ಳಿ ಗೋವಿಂದಪ್ಪ, ವಿನಾಯಕ ತೊಡರನಾಳು, ಕುಮಾರಸ್ವಾಮಿ, ಚಳ್ಳಕೆರೆ ವೀರೇಶ್‌, ಸುರೇಶ್‌ ಪಟ್ಟಣ್‌ ಮತ್ತಿತರರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ