ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಗಲಿದ ಹಿರಿಯ ಪತ್ರಕರ್ತರು, ಸಾಹಿತಿಗಳು ಆಗಿದ್ದ ಜಿ.ಎಸ್.ಉಜ್ಜನಪ್ಪ ಅವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಪತ್ರಿಕಾ ಭವನದ ಅಂಬೇಡ್ಕರ್‌ಸಭಾಂಗಣದಲ್ಲಿ ಜೂ.24 ರಂದು ಬೆಳಗ್ಗೆ 11.30ಕ್ಕೆ ನುಡಿನಮನ ಕಾರ್ಯಕ್ರಮ ನಡೆಯಲಿದ್ದು, ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಹೊಸದುರ್ಗ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್.ವಿನಾಯಕ ತೊಡರನಾಳು ಅಧ್ಯಕ್ಷತೆ ವಹಿಸುವರು.
ಮಾಧ್ಯಮ ಅಕಾಡೆಮಿ ಸದಸ್ಯರಾದ ಎಂ.ಎನ್.ಅಹೋಬಲಪತಿ ದಿಕ್ಸೂಚಿ ಭಾಷಣ ಮಾಡುವರು. ರಾಜ್ಯಸಭೆ ಮಾಜಿ ಸದಸ್ಯರು, ಜಿ.ಎಸ್.ಉಜ್ಜನಪ್ಪ ಅವರ ಅತ್ಯಾಪ್ತರಾದ ಎಚ್.ಹನುಮಂತಪ್ಪ, ಪ್ರಾಧ್ಯಾಪಕಿ ಹಾಗೂ ವಿಮರ್ಶಕಿ ತಾರಿಣಿ ಶುಭದಾಯಿನಿ, ನಿವೃತ್ತ ಪ್ರಾಧ್ಯಾಪಕ ಎಂ.ಜಿ.ರಂಗಸ್ವಾಮಿ ನುಡಿನಮನ ಸಲ್ಲಿಸಲಿದ್ದಾರೆ.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ವಾರ್ತಾ ಇಲಾಖೆ ನಿವೃತ್ತ ಅಧಿಕಾರಿ ದೇವರಾಜಯ್ಯ, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಹರಿಯಬ್ಬೆ ಹೆಂಜಾರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ್‌ವಿ ಅಪ್ಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



