Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರು ದೈಹಿಕ, ಮಾನಸಿಕವಾಗಿ ಸದೃಢರರಾಗಿರಬೇಕು

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ನಗರದಲ್ಲಿ ಜಿಲ್ಲಾಡಳಿತ
, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಏರ್ಪಡಿಸಲಾಗಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಕ್ರೀಡಾಜ್ಯೋತಿ ಮೆರವಣಿಗೆಯು ವೈಭವಯುತವಾಗಿ ನಡೆಯಿತು.

ತುಮಕೂರು ವಿಶ್ವವಿದ್ಯಾನಿಲಯ ಮುಂಭಾಗದಿಂದ ಆರಂಭವಾದ ಕ್ರೀಡಾಜ್ಯೋತಿ ಭವ್ಯ ಮೆರವಣಿಗೆಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಕ್ಷೇತ್ರದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪತ್ರಕರ್ತರು ಒತ್ತಡದಿಂದ ಮುಕ್ತರಾಗಲು ಕ್ರೀಡಾಕೂಟಗಳು ಆಯೋಜನೆ ಅವಶ್ಯಕ. ಈ ನಿಟ್ಟಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕ್ರೀಡಾಜ್ಯೋತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮಾತನಾಡಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕಾರ್ಯದಲ್ಲಿ ಸದಾ ನಿರತರಾಗಿರುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕವಾಗಿ ಸದೃಢರರಾಗಿರಬೇಕು. ಹಾಗಾಗಿ ಇಂತಹ ಕ್ರೀಡಾಕೂಟಗಳನ್ನು ಆಗಾಗ್ಗೆ ಆಯೋಜನೆ ಮಾಡುವುದು ಒಳಿತು ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗದಿಂದ ಹೊರಟ ಕ್ರೀಡಾಜ್ಯೋತಿ ಮೆರವಣಿಗೆಯು ಬಿ.ಎಚ್. ರಸ್ತೆ ಮುಖೇನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ಸಾಗಿ ಕ್ರೀಡಾಕೂಟ ಏರ್ಪಡಿಸಿದ್ದ ಮಹಾತ್ಮಗಾಂಧಿ ಕ್ರೀಡಾಂಗಣ ತಲುಪಿತು.

ಮೆರವಣಿಗೆ ಸಾಗಿದ ದಾರಿಯುದ್ಧಕ್ಕೂ ನಡೆದ ಲಿಂಗವೀರರ ಕುಣಿತ, ವಿವಿಧ ಕಾಲೇಜುಗಳ ಎನ್‌ಸಿಸಿ ವಿದ್ಯಾರ್ಥಿಗಳ ಪೆರೇಡ್ ನೋಡುಗರ ಗಮನ ಸೆಳೆಯಿತು.

ಈ ಕ್ರೀಡಾಜ್ಯೋತಿ ಮೆರವಣಿಗೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ, ಐಎಫ್‌ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಟಿ.ಎನ್. ಮಧುಕರ್ಹರೀಶ್ ಆಚಾರ್ಯ, ಸತೀಶ್ ಹಾರೋಗೆರೆ, ಯಶಸ್ ಕೆ. ಪದ್ಮನಾಭ್, ಪರಮೇಶ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರು, ವಿವಿಧ ಕಾಲೇಜುಗಳ ಎನ್‌ಸಿಸಿ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕಬಡ್ಡಿ ಟೂರ್ನಿಗೆ ಸಚಿವ ಸೋಮಣ್ಣ ಚಾಲನೆ

ನಂತರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾತನಾಡಿ, ಕ್ರೀಡೆ ಮನುಷ್ಯನ ಉತ್ಸಾಹಕ್ಕೆ, ಉಲ್ಲಾಸಕ್ಕೆ ಹಾಗೂ ನೆಮ್ಮದಿಗೆ ಅತ್ಯುತ್ತಮವಾದ ಸಾಧನ. ನಮ್ಮಲ್ಲಿರುವ ನೋವನ್ನು ಶಮನ ಮಾಡಲು ಕ್ರೀಡೆ ಸಹಕಾರಿ ಎಂದರು.

ತಮ್ಮ ದೈನಂದಿನ ಚಟುವಟಿಕೆಗಳೊಂದಿಗೆ ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಮನಸ್ಸಿನ ನೆಮ್ಮದಿ ಹಾಗೂ ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಒಳಿತು ಎಂದರು.

ಪತ್ರಕರ್ತರು ವರದಿಗಳನ್ನು ಬರೆಯುವಾಗ ಯಾರದೇ ಮುಲಾಜಿಲ್ಲಗೆ ಒಳಗಾಗದೆ ಸತ್ಯ ಸಂಗತಿ ತಿಳಿಸುವ ಕೆಲಸ ಮಾಡಬೇಕು. ಸತ್ಯ ಸಂಗತಿ ತಿಳಿಸುವುದರೊಂದಿಗೆ ಮಾಧ್ಯಮದವರಿಂದ ರಾಜ್ಯದ ಹಿತವನ್ನು ಕಾಪಾಡುವ ಕೆಲಸ ಆಗಬೇಕು ಎಂದು ಅವರು ಹೇಳಿದರು.

ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಿ ಪಾಲ್ಗೊಂಡಿರುವುದು ಸಂತೋಷದಾಯಕ. ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ಕ್ರೀಡೆ ಪ್ರತಿಯೊಬ್ಬರ ಜೀವನದಲ್ಲಿ ಅತಿ ಮುಖ್ಯ. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಕ್ರೀಡೂಕೂಟದಲ್ಲಿ ಪಾಲ್ಗೊಂಡಿರುವುದು ತುಂಬಾ ಸಂತಸದ ಸಂಗತಿ ಎಂದರು.

ಪತ್ರಕರ್ತರು ಸದಾ ಹಸನ್ಮುಖಿಗಳಾಗಿ ಕಾರ್ಯನಿರ್ವಹಿಸಲು ಇಂತಹ ಕ್ರೀಡಾಕೂಟಗಳ ಆಯೋಜನೆ ಅವಶ್ಯ. ಇಂದು ಸುದ್ದಿ ಮನೆಯಿಂದ ಹೊರ ಬಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಕ್ರೀಡಾಕೂಟದಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆ ಎಂದರು.

ಸದ್ಯದಲ್ಲೇ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸಹ ದೊರೆಯಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದ್ದಾರೆ ಎಂದರು.



ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಚಿದಾನಂದ ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ, ಐಎಫ್‌ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಟಿ.ಎನ್. ಮಧುಕರ್ ಮತ್ತಿತರರು ಭಾಗವಹಿಸಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ