Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಕ್ಕಳ ಕಾಣೆ ಪತ್ತೆಗೆ ಗಡವು ನೀಡಿ ವರದಿ ಪಡೆದುಕೊಳ್ಳಿ- ನ್ಯಾಯಾಧೀಶ ಎಂ.ವಿಜಯ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಣೆ ಪ್ರಕರಣಗಳಲ್ಲಿ ನಿಗದಿತ ಅವಧಿಯೊಳಗೆ ಮಕ್ಕಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಗಡುವು ನೀಡಿ ಪ್ರಕರಣದ ಸ್ಥಿತಿಗತಿ ಕುರಿತು ವರದಿ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ನಿರ್ದೇಶನ ನೀಡಿದರು.

ನಗರದ ಬಾಲ ಭವನ ಕಚೇರಿಯಲ್ಲಿ ಶುಕ್ರವಾರ ಕಾಣೆಯಾದ ಮಕ್ಕಳ ಪತ್ತೆ ಕುರಿತು ಪೋಷಕರು ಹಾಗೂ ತನಿಖಾ ಪೊಲೀಸ್ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು.

ಕಾಣೆಯಾದ ಮಕ್ಕಳ ಪತ್ತೆ ಕಾರ್ಯವನ್ನು ಚುರುಕುಗೊಳಿಸಬೇಕು. ಪತ್ತೆ ಕಾರ್ಯದ ತನಿಖೆ ಪ್ರಗತಿ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಮಕ್ಕಳು ಪತ್ತೆಯಾದ ಪ್ರಕರಣಗಳಲ್ಲಿ ಮಾಹಿತಿ ಪಡೆದು ಪ್ರಕರಣಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದರು.

2021 ರಿಂದ 2024 ವರೆಗೆ ಜಿಲ್ಲೆಯಲ್ಲಿ 365 ಮಕ್ಕಳ ಕಾಣೆ ಪ್ರಕರಣಗಳು ಐ.ಪಿ.ಸಿ ಕಲಂ 363ರ ಅಡಿಯಲ್ಲಿ ದಾಖಲಾಗಿವೆ. ಇವುಗಳ ಪೈಕಿ 359 ಪಕ್ರರಣಗಳಲ್ಲಿ ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಇದೇ ಅವಧಿಯಲ್ಲಿ ಪೋಷಕರೊಂದಿಗೆ ಕಾಣೆಯದ 131 ಮಕ್ಕಳ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 129 ರ ಪಕ್ರಣಗಳನ್ನು ಪತ್ತೆ ಹಚ್ಚಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ರಾಂಪುರ ಹಾಗೂ ಚಿಕ್ಕಜಾಜೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮಕ್ಕಳ ಕಾಣೆ ಪ್ರಕರಣಗಳಲ್ಲಿ ಪೊಲೀಸರು ಮಕ್ಕಳನ್ನು ಪತ್ತೆ ಹಚ್ಚಿ ಪೊಷಕರಿಗೆ ಒಪ್ಪಿಸಿಲಾಗಿದೆ ಎಂದು ಪೊಲೀಸರು ನ್ಯಾಯಾಧೀಶರಿಗೆ ವರದಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಸವಿತಾ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ್, ಗುರುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು