Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಾಗರಿಕರ ಪ್ರಕರಣಗಳ ವಿಚಾರಣೆಗೆ ಪ್ರಾಧಾನ್ಯತೆ- ನ್ಯಾಯಾಧೀಶ ವಿಜಯ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನ್ಯಾಯಾಲಯಗಳಲ್ಲಿ ಹಿರಿಯ ನಾಗರಿಕರ ಪ್ರಕರಣಗಳ ವಿಚಾರಣೆಗೆ ಪ್ರಾಧಾನ್ಯತೆ ನೀಡಲಾಗುತ್ತದೆ. ಸಾಧ್ಯವಾದಷ್ಟು ವಿಚಾರಣೆಯನ್ನು ಒಂದು ವರ್ಷದ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹೊಂಬೆಳಕು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ಭಾರತ ಸೇವಾ ದಳ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಡಿಯಂ ರಸ್ತೆಯ ಭಾರತ ಸೇವಾ ದಳ ಕಟ್ಟಡದಲ್ಲಿ ಗುರುವಾರ ಆಯೋಜಿಸಲಾಗಿದ್ದ, ವಿಶ್ವ ಹಿರಿಯರ ಮೇಲಿನ ದೌರ್ಜನ್ಯ ತಡೆ ಜಾಗೃತಿ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ರಾಷ್ಟಿçಯ ಕಾನೂನು ಸೇವೆಗಳ ಪ್ರಾಧಿಕಾರ 2016 ರಲ್ಲಿ ಹಿರಿಯ ನಾಗರಿಕರ ನೆರವು ಯೋಜನೆಯನ್ನು ಜಾರಿಗೊಳಿಸಿದೆ. ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ನೆರವು ಒದಗಿಸಲು ನಾಲ್ಕು ವಕೀಲರನ್ನು ನೇಮಿಸಲಾಗಿದೆ. ರಾಜ್ಯ ಸರ್ಕಾರ 2007 ರಲ್ಲಿ ಹಿರಿಯರ ನಾಗರಿಕ ಪಾಲನೆ ಪೋಷಣೆ ಮತ್ತು ಕಲ್ಯಾಣ ಅಧಿನಿಯಮ ಜಾರಿಗೊಳಿಸಿದೆ. ಇದರ ಅನ್ವಯ ಪ್ರತಿ ಉಪವಿಭಾಗಕ್ಕೆ ಒಂದು ನ್ಯಾಯಾಧೀಕರಣವನ್ನು ರಚಿಸಲಾಗಿದೆ.

ಉಪವಿಭಾಗಾಧಿಕಾರಿ ಆಯಾ ಉಪವಿಭಾಗದಲ್ಲಿರುವ ಎಲ್ಲ ಹಿರಿಯ ನಾಗರಿಕರ ಕ್ಷೇಮದ ಪಾಲಕರಾಗಿರುತ್ತಾರೆ. ಮಕ್ಕಳು ಸರಿಯಾಗಿ ನೋಡಿಕೊಳ್ಳದಿದ್ದರೆ, ಆಸ್ತಿ ಪಡೆದು ವಂಚಿಸಿದರೆ ಅಥವಾ ಇನ್ಯಾಯವುದೇ ರೀತಿ ತೊಂದರೆ ಸಿಲುಕಿದರೆ ಹಿರಿಯ ನಾಗರಿಕರು ಉಪವಿಭಾಗಾಧಿಕಾರಿಗಳ ಮೊರೆ ಹೋಗಬಹುದು. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಿರಿಯ ನಾಗರಿಕರ ಮಾಹಿತಿಯನ್ನು ಠಾಣೆಯಲ್ಲಿ ಸಂಗ್ರಹಿಸಬೇಕು. ತಿಂಗಳಿಗೊಮ್ಮೆ ಹಿರಿಯ ನಾಗರಿಕರ ಸಭೆ ನಡೆಸಿ ಕುಂದು ಕೊರತೆಯನ್ನು ಆಲಿಸಬೇಕು ಎಂದು ನ್ಯಾಯಾಧೀಶ ಎಂ.ವಿಜಯ್ ಹೇಳಿದರು.


ತಂದೆ ತಾಯಿಗಳು ಸ್ವಂತ ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಅಥವಾ ವಂಚನೆಗೆ ಒಳಗಾಗಿ ಆಸರೆ ಹಾಗೂ ನ್ಯಾಯಾ ಕೋರಿ ನ್ಯಾಯಾಲಯದ ಮೊರೆ ಬರುತ್ತಾರೆ. ಇದಕ್ಕೆ ಮುಖ್ಯ ಕಾರಣ ಮಕ್ಕಳನ್ನು ಸಂಸ್ಕಾರ ಹಾಗೂ ಮೌಲ್ಯಗಳು ಇಲ್ಲದೆ ಬೆಳೆಸಿರುವುದು ಆಗಿದೆ. ಯುವ ಜನರು ತಂದೆ ತಾಯಿಗಳನ್ನು ನೋಡಿಕೊಳ್ಳುವ ನೈತಿಕ ಜವಬ್ದಾರಿ ಮೆರೆತು, ಅಮಾನವೀಯವಾಗಿ ವರ್ತಿಸುವುದು ಖೇದಕರ ಸಂಗತಿಯಾಗಿದೆ. ಇದನ್ನು ಸರಿಪಡಿಸಲು ಇಂದಿನ ಮಕ್ಕಳಿಗೆ ಹಿರಿಯರ ಬಗ್ಗೆ ಗೌರವ ಆದರಗಳು ಮೂಡುವಂತೆ ಸಂಸ್ಕಾರಯುತವಾಗಿ ಬೆಳೆಸುವುದು ಅಗತ್ಯವಾಗಿದೆ ನ್ಯಾಯಾಧೀಶ ಎಂ.ವಿಜಯ್ ಅಭಿಪ್ರಾಯ ವ್ಯಕ್ತಪಡಿಸಿದರು.


ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಆಸ್ತಿಗೊಸ್ಕರ ತಂದೆ ತಾಯಿಯರನ್ನು ದೂರ ಮಾಡಿಕೊಳ್ಳುವ ಪ್ರಕರಣಗಳು ಸಾಕಷ್ಟು ಇವೆ. ಇಂತಹ ಸಂದರ್ಭದಲ್ಲಿ ಕಾಯ್ದೆಯ ಅನುಸಾರ ಹಿರಿಯ ನಾಗರಿಕರು ಕಾನೂನಿನ ನೆರವು ಪಡೆದುಕೊಳ್ಳಬಹುದು ಎಂದರು.


ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷ ಜೂನ್ 15 ನ್ನು ವಿಶ್ವ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಜಾಗೃತಿ ದಿನವಾಗಿ ಆಚರಿಸಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರ ರಕ್ಷಣೆಗೆ ಪ್ರತ್ಯೇಕ ಕಾಯ್ದೆಗಳನ್ನು ಜಾರಿಗೊಳಿಸಿವೆ. ಕೇಂದ್ರ ಸರ್ಕಾರ ಸಹಾಯವಾಣಿ ಸಂಖ್ಯೆ 14567, ರಾಜ್ಯ ಸರ್ಕಾರ ಸಹಾಯವಾಣಿ ಸಂಖ್ಯೆ 1090 ಅನ್ನು ಹಿರಿಯ ನಾಗರಿಕರಿಗಾಗಿ ಆರಂಭಿಸಿವೆ. ಪ್ರತಿ ಜಿಲ್ಲೆಯಲ್ಲಿ ಹಿರಿಯ ಸಹಾಯ ಕೇಂದ್ರಗಳು ಕಾರ್ಯನಿರ್ವಹಿಸಿತ್ತಿವೆ. ಹಿರಿಯ ನಾಗರಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬಹುದು ಎಂದರು.


ಸಭೆಯಲ್ಲಿ ಉಪ ಕಾನೂನು ನೆರವು ಅಭಿರಕ್ಷಕ ಎಂ.ಮೂರ್ತಿ ಹಿರಿಯ ನಾಗರಿಕರ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಅಧ್ಯಕ್ಷ ಪ್ರೇಮನಾಥ್, ಗೌರವ ಅಧ್ಯಕ್ಷ ರಂಗಪ್ಪ ರೆಡ್ಡಿ, ಗ್ರೇಡ್-2 ತಹಶೀಲ್ದರ್ ನರಸಿಂಹಮೂರ್ತಿ, ಭಾರತ ಸೇವಾದಳ ಅರುಣ್‌ಕುಮಾರ್, ಅಣ್ಣಯ್ಯ, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಶಂಕರಪ್ಪ ಸೇರಿದಂತೆ ಮತ್ತಿರರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ