Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆ ಸೆರೆ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕಾಡಾನೆ ದಾಳಿಗೆ ರೈತನೊಬ್ಬ ಸೇರಿ ಮತ್ತೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಪುಂಡಾನೆಯೊಂದು ಸೆರೆ ಹಿಡಿರುವ ಘಟನೆ ಜಿಲ್ಲೆಯ ಎನ್​.​ಆರ್.ಪುರ ತಾಲೂಕಿನಲ್ಲಿ ಜರುಗಿದೆ.


ಬನ್ನೂರು ಗ್ರಾಮದಲ್ಲಿ ಕಳೆದ ಬುಧವಾರ ರಾತ್ರಿ ಕಾಡಾನೆಯೊಂದು ಕೂಲಿ ಕಾರ್ಮಿಕ ಮಹಿಳೆಅನಿತಾರನ್ನು ಕೊಂದಿತ್ತು. ಈ ಘಟನೆಯ ಬಳಿಕ ಬಾಳೆಹೊನ್ನೂರು ಅರಣ್ಯ ಇಲಾಖೆ ಮುಂಭಾಗ ಸಾವಿರಾರು ರೈತರು, ಸಾರ್ವಜನಿಕರು ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಐದು ದಿನಗಳ ಅಂತರದಲ್ಲಿ ಕಾಡಾನೆ ತುಳಿತಕ್ಕೆ ಮತ್ತೊಬ್ಬ ವ್ಯಕ್ತಿ ಸುಬ್ಬೇಗೌಡ ಎಂಬವರು ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ರೈತರು ಬೀದಿಗಿಳಿದು ಪ್ರತಿಭಟಿಸಿದ್ದರು. ಇದಾದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ, ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಿಂದ ನಾಲ್ಕು ಕುಮ್ಕಿ ಆನೆಗಳನ್ನು ಬಳಸಿಕೊಂಡು ಕಾಡಾನೆ ಸೆರೆಗೆ ಮುಂದಾಯಿತು.

ಎರಡು ದಿನದಿಂದ ಹಿಂದೆಯಷ್ಟೇ ಆನೆ ಸೆರೆ ಕಾರ್ಯಾಚರಣೆ ಆರಂಭವಾಗಿತ್ತು. ಒಂದು ಪುಂಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ ಬಳಿಕ ಆನೆ ತಪ್ಪಿಸಿಕೊಂಡಿದೆ. ನಂತರ ಎರಡನೇ ಬಾರಿ ಅರಿವಳಿಕೆ ಚುಚ್ಚುಮದ್ದು ನೀಡಿದಾಗ ಆನೆ ಸೆರೆಯಾಗಿದ್ದು, ಸ್ಥಳಾಂತರಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಎರಡು ಜೀವಗಳನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆ ಸೆರೆಯಿಂದ ಎನ್​.​ಆರ್.ಪುರ ತಾಲೂಕಿನ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಬೇರೆ ಕಾಡಾನೆಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಭಾನುವಾರ ಮೂಡಿಗೆರೆ-ಬೇಲೂರು ಗಡಿಯಲ್ಲಿ 25 ಆನೆಗಳು ಕಾಣಿಸಿಕೊಂಡಿದ್ದವು. ಅರಣ್ಯ ಇಲಾಖೆಯ ವಿರುದ್ದ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅರಣ್ಯ ಇಲಾಖೆ ಕಚೇರಿ ಮುಂಭಾಗ ಸೇರಿ ಪ್ರತಿಭಟನೆ ನಡೆಸಿ, ಘೋಷಣೆ‌ಗಳನ್ನು ಕೂಗಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ