Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಭಾರತ ಅಂಗವಾಗಿ ಜ್ಯೋತಿ ಯಾತ್ರೆ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ʻಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆಯ ಮುಖ್ಯಾಂಶಗಳು ಹೀಗಿವೆ;

ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26, 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನೆಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.

ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು.

 ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸಲಾಗುವುದು.

ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆಗಳನ್ನು ಆಯೋಜಿಸಲಾಗುವುದು. ಮಹಾತ್ಮ ಗಾಂಧೀಜಿ ಅವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳನ್ನು ಎಲ್ಲಾ ಶಾಲೆಗಳಲ್ಲಿ ಬರೆದು ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು.

* ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ ಮೂರು ನಾಟಕಗಳನ್ನು ನಿರ್ಮಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ.

* ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಇನ್ನೂ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ʻಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆ ನಡೆಯಿತು.

ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶತಮಾನೋತ್ಸವ ಸಮಿತಿಯ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ