ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ವೇಗ ನೀಡಲು ಮಧು ಪಾಲೇಗೌಡ ಎಂ.ಪಿ. ಅವರನ್ನು ಚುನಾವಣಾ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನೇಮಿಸಿದೆ.
ಜಿಲ್ಲಾ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾಗಿ ಇವರು ಸಲ್ಲಿಸಿದ ಸೇವೆ ಹಾಗೂ ಸಂಘಟನಾ ಚಾತುರ್ಯವನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದೆ.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನಿರ್ದೇಶನ ಹಾಗೂ ರಾಜ್ಯ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯ ಮೇರೆಗೆ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಿ, ಹಿರಿಯ ನಾಯಕರು ಮತ್ತು ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ನೂತನ ಉಸ್ತುವಾರಿಗಳಿಗೆ ಸೂಚಿಸಲಾಗಿದೆ.




