Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕದಾಸರು - ನಾರಾಯಣಗುರುಗಳ ಆದರ್ಶಗಳನ್ನು ಜೀವನದಲ್ಲಿ ಪಾಲಿಸಬೇಕು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನಕದಾಸರು - ನಾರಾಯಣಗುರುಗಳ ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವುಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ "ಕನಕ‌ಕಾವ್ಯ ದೀವಿಗೆ" ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿ ಉದ್ಘಾಟಿಸಿ ಮಾತನಾಡಿದರು.


16ನೇ ಶತಮಾನದಲ್ಲೇ ಕನಕದಾಸರು ಜನಿಸಿದ್ದರು. ಪಾಳೇಗಾರರ ಕುಟುಂಬದಲ್ಲಿ ಜನಿಸಿದರೂ ಸಂತರಾದರು ಮಾತ್ರವಲ್ಲ ಕವಿ, ದಾರ್ಶನಿಕರು, ಸಾಮಾಜಿಕ ಹೋರಾಟಗಾರರೂ ಆಗಿದ್ದರು. ಸಮಾಜದ ಅಸಮಾನತೆ ವಿರುದ್ಧ ಬಂಡಾಯ ಹೂಡಿದರು. ಬುದ್ದ, ಬಸವ, ನಾರಾಯಣಗುರು, ಕನಕದಾಸರು ಜಾತಿ ವ್ಯವಸ್ಥೆ, ವರ್ಗ ವ್ಯವಸ್ಥೆ ಹೋಗಲಾಡಿಸಲು ಶ್ರಮಿಸಿದರು.

ಯಾವ ದೇವಸ್ಥಾನಕ್ಕೆ ನಿಮ್ಮನ್ನು ಬಿಡುವುದಿಲ್ಲವೋ ಆ ದೇವಸ್ಥಾನಕ್ಕೆ ಹೋಗಬೇಡಿ. ನಿಮ್ಮದೇ ದೇವರುಗಳಿಗೆ ನಿಮ್ಮದೇ ದೇವಸ್ಥಾನ ಕಟ್ಟಿಸಿ ಎಂದು ನಾರಾಯಣ ಗುರುಗಳು ಕರೆ ನೀಡಿದ್ದರು. ನಿಮ್ಮನ್ನು ಯಾವ ದೇವಸ್ಥಾನಕ್ಕೆ ಸೇರಿಸುವುದಿಲ್ಲವೋ ಆ ದೇವಸ್ಥಾನಕ್ಕೆ ಹೋಗಿ ಇಣುಕುವ ಅಗತ್ಯ ಏನಿದೆ? ಹೊರಗೇ ನಿಂತು ಕೈ ಮುಗಿಯುವುದಕ್ಕಿಂತ ನಿಮ್ಮದೇ ಗುಡಿ ನಿರ್ಮಿಸಿ ಎನ್ನುವ ನಾರಾಯಣ ಗುರುಗಳ ಆದರ್ಶ ಪಾಲನೆ ಆಗಬೇಕು.

16ನೇ ಶತಮಾನದಲ್ಲಿ ಕನಕದಾಸರು ಕುಲ ಕುಲ ಕುಲ ಎಂದು ಬಡಿದಾಡದಿರಿ ಎಂದರು. 12ನೇ ಶತಮಾನಲ್ಲಿ ಬಸವಣ್ಣನವರು ಇವನಾರವ, ಇವನಾರವ ಎನ್ನದಿರಿ, ಇವ ನಮ್ಮವ ಎಂದೆಣಿಸಯ್ಯಾ ಎಂದು ಹೇಳಿದರು. ಆದರೂ ಇವತ್ತಿಗೂ ಕುಲ ಮತ್ತು ಇವನಾರವ ಎನ್ನುವ ಜಾತಿ ತಾರತಮ್ಯ ಆಚರಣೆಯಲ್ಲಿದೆ.

ಜಾತಿ ವ್ಯವಸ್ಥೆಗೆ ಪಟ್ಟಭದ್ರರು ಇನ್ನೂ ನೀರೆರೆಯುತ್ತಲೇ ಇದ್ದಾರೆ. ಹೀಗಾಗಿ ಸಮಾಜದ ಬದಲಾವಣೆಗೆ ಧೈರ್ಯ ಬೇಕಾಗುತ್ತದೆ. ವೈಜ್ಞಾನಿಕತೆ, ವೈಚಾರಿಕತೆಯ ಶಕ್ತಿಯಿಂದ ಸಮಾಜದ ಅಸಮಾನತೆ ಅಳಿಯಲು ಸಾಧ್ಯ.

ಕನಕದಾಸರ ರಾಮಧಾನ್ಯ ಚರಿತೆ, ಬಸವಣ್ಣನವರ ಕಾಯಕ - ದಾಸೋಹ ಎರಡೂ ಶ್ರಮಿಕ ಸಂಸ್ಕೃತಿಯನ್ನು, ಕಾಯಕ ಮಾಡಿ ಬದುಕುವುದನ್ನು ಸಾರುತ್ತದೆ. ಹೀಗಾಗಿ ಕನಕ, ಬಸವರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಮಾತ್ರವಲ್ಲ, ಜೀವನದಲ್ಲಿ ಇವರ ಆದರ್ಶಗಳನ್ನು ಪಾಲಿಸಬೇಕು ಎಂದು ಸಿಎಂ ಕರೆ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ