Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನಕದಾಸರ ಜಯಂತ್ಯುತ್ಸವ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ಸಂತಶ್ರೇಷ್ಠ ಕನಕದಾಸರ ಜಯಂತ್ಯುತ್ಸವವನ್ನು ಆಚರಿಸಲಾಯಿತು.

ಶ್ರೀ ದೇವರಾಜ ಅರಸ್‌ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಸಮಸಮಾಜ ನಿರ್ಮಾಣದ ಪ್ರತಿಪಾದಕರಾಗಿ ಎಲ್ಲ ವರ್ಗಗಳ ಹಿತವನ್ನು ಬಯಸಿದ ಅಪ್ರತಿಮ ದಾರ್ಶನಿಕ ಕನಕದಾಸರ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಾಮಾಜಿಕ ಬದಲಾವಣೆಗೆ ಮುನ್ನುಡಿ ಬರೆಯುವ ಅಗತ್ಯವಿದೆ. 5 ಶತಮಾನಗಳಷ್ಟು ಹಿಂದೆಯೇ ಸಾಮಾಜಿಕವಾಗಿ ಅನೇಕ ಪಿಡುಗುಗಳ ವಿರುದ್ದ ದನಿಯೆತ್ತಿದ ಕನಕದಾಸರ ಕೀರ್ತನೆಗಳ ಸಾರವನ್ನು ಅರ್ಥ ಮಾಡಿಕೊಳ್ಳುವುದು ಅಗತ್ಯ. ಆ ಮೂಲಕ ಬದಲಾವಣೆ ಸಾಧ್ಯ ಎಂದರು.

ಆರ್‌ಎಲ್‌ಜೆಐಟಿ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನಕದಾಸರು ಈ ನಾಡಿನ ಮೊದಲ ಸಾತ್ವಿಕ ಬಂಡಾಯದ ದನಿಯಾಗಿದ್ದಾರೆ. ವರ್ಗ, ಜಾತಿ ಅಸಮಾನತೆಯ ವಿರುದ್ದ ಪ್ರತಿಪಾದಿಸಿದ ಅವರು ಸಮರ್ಪಣಾ ಮನೋಭಾವದ ಭಕ್ತಿಯ ಮೂಲಕ ಮಹತ್ತನ್ನ ಸಾಧಿಸಿದ ವ್ಯಕ್ತಿತ್ವ. ಮೇಲು-ಕೀಳುಗಳ ಪರಿಕಲ್ಪನೆಯನ್ನು ಧಿಕ್ಕರಿಸಿ ಶೋಷಿತ ಮತ್ತು ಧಮನಿತ ವರ್ಗದ ಪರ ನಿಂತ ದಾರ್ಶನಿಕರಾಗಿದ್ದಾರೆ. ನವಿರು ಭಾವದ ಮನೋವಿಲಾಸದ ಕವಿಯಾಗಿ, ನಾಡರಕ್ಷಣೆಯ ಹೊಣೆಯೊತ್ತ ಕಲಿಯಾಗಿ, ಸಾಮಾಜಿಕ ಬದಲಾವಣೆಗೆ ಮುನ್ನುಡಿ ಬರೆದ ಸಮಾಜ ಸುಧಾರಕನಾಗಿ ಕನಕದಾಸರು ಮುಖ್ಯವಾಗುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಗೌರ್ನಿಂಗ್‌ಕೌನ್ಸಿಲ್‌ಸದಸ್ಯ ಜೆ.ಆರ್.ರಾಕೇಶ್, ಮಾನವ ಸಂಪನ್ಮೂಲ ನಿರ್ದೇಶಕ ಎನ್.ಎಸ್.ಬಾಬುರೆಡ್ಡಿ, ಡೀನ್‌ಡಾ.ಶ್ರೀನಿವಾಸರೆಡ್ಡಿ, ಎಸ್‌ಡಿಯುಐಎಂ ಪ್ರಾಂಶುಪಾಲ ಡಾ.ಗೌರಪ್ಪ, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ಎಇಇ ಐ.ಎಂ.ರಮೇಶ್‌ಕುಮಾರ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ದೈಹಿಕ ಶಿಕ್ಷಣ ನಿರ್ದೇಶಕ ಪಿ.ಡಿ.ದಾದಾಫೀರ್, ವ್ಯವಸ್ಥಾಪಕ ಎಸ್.ಯತಿನ್ ಮತ್ತಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ