Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಾತಿ ತಾರತಮ್ಯದ ನೋವುಂಡು ನೋವನ್ನೇ ಹಾಡಾಗಿಸಿದವರು ಕನಕದಾಸರು: ಕೆ.ವಿ.ಪಿ

ಜಾತಿ ತಾರತಮ್ಯದ ನೋವುಂಡು ನೋವನ್ನೇ ಹಾಡಾಗಿಸಿದವರು ಕನಕದಾಸರು: ಕೆ.ವಿ.ಪಿ
ಚಂದ್ರವಳ್ಳಿ ನ್ಯೂಸ್, ಕೋಲಾರ:
ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಕನಕ ನೌಕರರ ಸಂಘ , ಜಿಲ್ಲಾ ಮತ್ತು ಪ್ರದೇಶ ಕುರುಬರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದು ವಿಶ್ವ ಪ್ರಜಾಪ್ರಭುತ್ವ ದಿನ. ಇದೇ ದಿನ ಕನಕ ಸಮುದಾಯದಿಂದ ಕಾರ್ಯಕ್ರಮ ನಡೆಯುತ್ತಿದೆ. ಕನಕದಾಸರು ಸಮಾಜದಲ್ಲಿನ‌ ತಾರತಮ್ಯ ಹೋಗಲಾಡಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸ್ಥಾಪಿಸಲು ಶ್ರಮಿಸಿದ್ದರು ಎಂದು ವಿವರಿಸಿದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ. ಕನಕದಾಸರು ಸಮಾಜದ ನೋವನ್ನು ಹಾಡಾಗಿ ಹಾಡಿದರು. ಸಮಾಜದಲ್ಲಿನ ತಾರತಮ್ಯಕ್ಕೆ ತಮ್ಮ ವಚನಗಳ ಮೂಲಕ ಕನ್ನಡಿ ಹಿಡಿದರು.
"ಕುಲ ಕುಲವೆಂದು ಬಡಿದಾಡದಿರಿ..." ಎಂದು ಕನಕರು ಹಾಡುವ ಮೊದಲು ಕುಲದ ಅವಮಾನವನ್ನು ಅನುಭವಿಸಿದ್ದರು. ಈ ಅವಮಾನವನ್ನು ಅಳಿಸಲು ಬದುಕಿನುದ್ದಕ್ಕೂ ಶ್ರಮಿಸಿದರು.‌

ಹೀಗಾಗಿ ಭಕ್ತಿಯ ಜೊತೆಗೆ ವೈಚಾರಿಕ ಹಿನ್ನೆಲೆಯಲ್ಲಿ ನಾವು ಕನಕರನ್ನು ಅರಿತರೆ ಮಾತ್ರ ಕನಕದಾಸರು ಒಬ್ಬ ಬಂಡಾಯಗಾರರು ಎನ್ನುವುದು ನಮಗೆ ಅರ್ಥ ಆಗುತ್ತದೆ. ಕನಕರನ್ನು ಪೂಜಿಸುವ ಜೊತೆಗೆ ಅವರೊಳಗಿನ ಪ್ರತಿಭಟನಾ ಶಕ್ತಿಯನ್ನು ನಾವು ಗ್ರಹಿಸಬೇಕಿದೆ ಎಂದು ಹೇಳಿದರು.
ಕನಕರೆಂದರೆ ಭಕ್ತಿ, ಭಾವ, ತನ್ಮಯತೆ ಮಾತ್ರವೇ ಎಂದುಕೊಂಡರೆ ಸಾಲದು. ಅವರ ಹೋರಾಟ, ವೈಚಾರಿಕ ಚಿಂತನೆ, ಚಳವಳಿಗಳ ಬಗ್ಗೆ ಹೆಚ್ಚೆಚ್ವು ತಿಳಿಯಬೇಕು. ಹೆಚ್ಚೆಚ್ಚು ಮಾತಾಡಬೇಕು.

ಕನಕರ ಹೋರಾಟದ ಪರಂಪರೆಯನ್ನೇ ನಾಶಮಾಡುವ ಹುನ್ನಾರದ ಭಾಗವಾಗಿ ಅವರನ್ನು ಕೇವಲ ಭಕ್ತಿಗೆ ಸೀಮಿತಗೊಳಿಸುತ್ತಿದ್ದಾರೆ. ಇದು ನಮ್ಮ ಇವತ್ತಿನ ಮತ್ತು ಮುಂದಿನ ಪೀಳಿಗೆಯಲ್ಲಿ ಹೋರಾಟವನ್ನು ಮರೆಸುವ ತಂತ್ರವೇ ಆಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾಗಿನೆಲೆ ಮಹಾಸಂಸ್ಥಾನದ ಹೊಸದುರ್ಗ ಗುರುಪೀಠದ ಜಗದ್ಗುರು ಈಶ್ವರಾನಂದಪುರಿ ಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ವರ್ತೂರು ಪ್ರಕಾಶ್, ಕೊಪ್ಪಳ ವಿಶ್ವ ವಿದ್ಯಾಲಯದ ವಿಸಿ ಬಿ.ಕೆ.ರವಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಸೇರಿ ಸಮುದಾಯದ ಹಲವಾರು ಮುಖಂಡರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ