Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜರ್ಮನಿಯ ಬರ್ಲಿನ್ ನಲ್ಲಿ ಮೇಳೈಸಿದ ಕನ್ನಡದ ಹಬ್ಬ!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ಎಲ್ಲಾದರೂ ಇರು ಎಂತಾದರು ನೀ ಕನ್ನಡವಾಗಿರು....' ಎಂಬ ಕವಿವಾಣಿಗೆ ಅನುಗುಣವಾಗಿ ಕರುನಾಡ ನೆಲದಿಂದ ಸಹಸ್ರಾರು ಕಿಲೋ ಮೀಟರ್ ದೂರದ ಜರ್ಮನಿಯಲ್ಲಿ ಬರ್ಲಿನ್ ಕನ್ನಡ ಬಳಗ-BKB ಕನ್ನಡ ಹಬ್ಬವನ್ನು ಯಶಸ್ವಿಯಾಗಿ ಆಚರಿಸಿರುವುದು ಕನ್ನಡಿಗರಾಗಿ ಎಲ್ಲರೂ ಹೆಮ್ಮೆ ಪಡುವಂತಹ ಕಾರ್ಯ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಜರ್ಮನಿಯಲ್ಲಿ ಕನ್ನಡ ಭಾಷೆ ಮತ್ತು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಬಿಕೆಬಿ ಬೆಳಗುತ್ತಿರುವುದು ಸ್ತುತ್ಯಾರ್ಹವಾಗಿದೆ. ಇತ್ತೀಚೆಗಷ್ಟೇ ಬರ್ಲಿನ್ನಲ್ಲಿ ನಡೆದ ‘Karneval der Kulturen 2025ಎಂಬ ಅತ್ಯಂತ ಹೆಸರಾಂತ ಬಹುಸಾಂಸ್ಕೃತಿಕ ಹಬ್ಬದಲ್ಲಿ,

ಬರ್ಲಿನ್ ಕನ್ನಡ ಬಳಗ (BKB) ತಂಡವು ಪ್ರಸಿದ್ಧ ಹಂಪಿಯ ರಥದ ಅಚ್ಚುಕಟ್ಟಾದ ಮಾದರಿ ನಿರ್ಮಿಸಿ, ಅತ್ಯುತ್ತಮ ಮಾದರಿ ವಿಭಾಗದಲ್ಲಿ (Best Wagen Construction) ಪ್ರಶಸ್ತಿ ಪಡೆದಿದ್ದಾರೆ. ಭಾಗವಹಿಸಿದ್ದ 69 ತಂಡಗಳಲ್ಲಿ ನಮ್ಮ ಐತಿಹಾಸಿಕ ಹಂಪಿ ರಥ ಎಲ್ಲರ ಮನ ಗೆದ್ದಿರುವುದು ನಿಜಕ್ಕೂ ಶ್ಲಾಘನೀಯ ಎಂದು ಸಚಿವರು ತಿಳಿಸಿದರು.

ಬಿಕೆಬಿಯ ಕಾರ್ಯಗಳು ಯಶಸ್ವಿಯಾಗಿ ಮುಂದುವರೆಯಲಿ, ಕನ್ನಡತನ, ನಮ್ಮ ಸಂಸ್ಕೃತಿ ಜರ್ಮನಿಯಾದ್ಯಂತ ಇನ್ನಷ್ಟು ವಿಜೃಂಭಿಸಲಿ. ವಿಶ್ವದೆಲ್ಲೆಡೆ ಇಂತಹ ಕಾರ್ಯಕ್ರಮಗಳು ನಡೆಯುವಂತಾಗಲಿ. ಕನ್ನಡದ ಕಂಪು ಎಲ್ಲೆಡೆ ಪಸರಿಸಲಿ ಎಂದು ಸಚಿವ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ