ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಪ್ರದಾಯಿಕ ಹಳದಿ-ಕೆಂಪು ಕನ್ನಡ ಧ್ವಜದ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಧ್ವಜಕ್ಕೆ ಮತ್ತೊಂದು ಬಣ್ಣವನ್ನು ಸೇರಿಸಿ, ಮಧ್ಯಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಂತಿಮ ನಿರ್ಣಯಕ್ಕಾಗಿ ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಲಾಗುವುದು ಎಂದರು.
ಅಲ್ಲದೆ, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಹಾಗೂ ಐಟಿ-ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲೂ ಕನ್ನಡ ಧ್ವಜಾರೋಹಣವನ್ನು ಕಡ್ಡಾಯಗೊಳಿಸಲು ಅಗತ್ಯ ಕಾನೂನು ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಪ್ರಕಟಿಸಿದರು.




