LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬಯಿಯಲ್ಲಿ ಕನ್ನಡ ಪತ್ರಕರ್ತರ ಸಂಭ್ರಮ: ಜಿ.ಎನ್. ಮೋಹನ್‌ಗೆ ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಮುಂಬೈ:
ಏಕ ಭಾಷೆ, ಏಕ ಉಡುಪು, ಏಕ ಆಹಾರ ಸಂಸ್ಕೃತಿಯನ್ನು ರೂಪಿಸುವ ಪ್ರಯತ್ನಗಳಂತೆ, ದೇಶದಲ್ಲಿ ಸದ್ದಿಲ್ಲದೆ ಏಕ ಮಾಧ್ಯಮದ ಪರಿಕಲ್ಪನೆಯನ್ನು ರೂಪಿಸುವ ಯತ್ನವೂ ನಡೆಯುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ತಜ್ಞ ಜಿ.ಎನ್. ಮೋಹನ್ ಆತಂಕ ವ್ಯಕ್ತಪಡಿಸಿದರು.

ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮುಂಬೈ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಮಾಧ್ಯಮವು ಸಮಾಜದ ಕನ್ನಡಿ ಮತ್ತು ಪ್ರಜಾಪ್ರಭುತ್ವದ ಕಾವಲುಗಾರವಾಗಿರಬೇಕು. ಆದರೆ ಅದು ಉದ್ಯಮದ ಸ್ವರೂಪವನ್ನು ಪಡೆದ ಕ್ಷಣದಿಂದಲೇ ಸಮಾಜವನ್ನು ಕಟ್ಟುವ ತನ್ನ ಮೂಲ ಜವಾಬ್ದಾರಿಯಿಂದ ದೂರ ಸರಿಯಲು ಆರಂಭಿಸಿತು. ಇಂದು ಮಾಧ್ಯಮವು ಹಣ ಮತ್ತು ಅಧಿಕಾರ ಎರಡನ್ನೂ ತಂದುಕೊಡುವ ಪ್ರಬಲ ಸಾಧನವಾಗಿ ರೂಪುಗೊಂಡಿರುವುದು ಆತಂಕಕಾರಿ ಬೆಳವಣಿಗೆಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, “ಉದ್ಯೋಗ ಅರಸಿ ಮುಂಬಯಿಗೆ ಬಂದ ಕನ್ನಡಿಗರು ಈ ಮಹಾನಗರದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಮರಾಠಿ ನೆಲದಲ್ಲಿ ಕನ್ನಡ ಪತ್ರಕರ್ತರು ಪ್ರಾಮಾಣಿಕ ಪತ್ರಿಕೋದ್ಯಮದ ಮೂಲಕ ಕನ್ನಡದ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ. ಇಂತಹ ನೆಲದಲ್ಲಿ ಕನ್ನಡ ಪತ್ರಕರ್ತರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಕೆಯುಡಬ್ಲ್ಯೂಜೆ ಮುಂಬೈ ಘಟಕವನ್ನು ಬಲಿಷ್ಠ ಸಂಘಟನೆಯಾಗಿ ಬೆಳೆಸಿರುವುದು ನಿಜಕ್ಕೂ ಅಭಿನಂದನೀಯಎಂದು ಹೇಳಿದರು.

ಮುಂಬಯಿಯಲ್ಲಿ ಕನ್ನಡ ಪತ್ರಕರ್ತರ ಸಂಘಟನೆಯನ್ನು ಕಟ್ಟಿಬೆಳೆಸಲು ಶ್ರಮಿಸಿದ ರೋನ್ಸ್ ಬಂಟ್ವಾಳ, ಶಿವು ಮೂಡಿಗೆರೆ, ದಯಾನಂದ ಸಾಲಿಯಾನ (ಸಾದಯ್ಯ) ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರ ಸೇವೆಯನ್ನು ಅವರು ವಿಶೇಷವಾಗಿ ಶ್ಲಾಘಿಸಿ ಅಭಿನಂದಿಸಿದರು.

news_1785629771_5_366.webp

 

ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ಮುಂಬೈ ಘಟಕದ ಅಧ್ಯಕ್ಷ ಶಿವು ಮೂಡಿಗೆರೆ, ಪ್ರಧಾನ ಕಾರ್ಯದರ್ಶಿ ರೋನ್ಸ್ ಬಂಟ್ವಾಳ, ಸಂಘದ ಗೌರವ ಸಲಹೆಗಾರ ಐ.ಆರ್. ಶೆಟ್ಟಿ, ಡಾ. ಕಿರಣ್ ಶೆಟ್ಟಿ, ಕಪಸಂ ಅಧ್ಯಕ್ಷೆ ಡಾ. ಜಿ.ಪಿ. ಕುಸುಮ, ಸದಾರಾಮ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಪತ್ರಿಕೋದ್ಯಮದ ಮೌಲ್ಯಗಳು, ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಸಂಘಟಿತ ಶಕ್ತಿಯ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಪತ್ರಿಕಾ ದಿನಾಚರಣೆಯ ಅಂಗವಾಗಿ ನಡೆದ ಈ ಸಮಾರಂಭವು ಕನ್ನಡ ಪತ್ರಕರ್ತರ ಒಗ್ಗಟ್ಟು, ವೃತ್ತಿಪರ ಬದ್ಧತೆ, ಭಾಷಾಭಿಮಾನ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮತ್ತೊಮ್ಮೆ ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಮೂಡಿಬಂತು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು