Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ  :
ಪ್ರತಿಯೊಬ್ಬ ಕನ್ನಡಿಗರಲ್ಲೂ  ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು  ಮಾತ್ರ ಸಾಧ್ಯ ಎಂದು ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ತಿಳಿಸಿದರು.

      ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು. 

 ಕನ್ನಡಿಗರ ಅವಿರತ ಹೋರಾಟದ ಫಲ‌ವಾಗಿ ಕರ್ನಾಟಕ ಏಕೀಕರಣದ ಕನಸು ನನಸಾಯಿತು. ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯಸಂಸ್ಕೃತಿ, ಕಲೆಯ ಬಗ್ಗೆ ಕನ್ನಡಿಗರ  ಅಭಿಮಾನ ಹೊಂದಬೇಕಾಗಿದೆ. ಕನ್ನಡಿಗರಿಗೆ    ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು. 

  ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,   ಕುವೆಂಪು ರಚಿಸಿರುವ  ನಾಡಗೀತೆಗೆ ನೂರು ವರ್ಷ ತುಂಬಿದ ಸಂಭ್ರಮವನ್ನು   ರಾಜ್ಯದ ಶಾಲಾ ಕಾಲೇಜು, ಜಿಲ್ಲಾ ಮತ್ತು  ತಾಲ್ಲೂಕು ಕೇಂದ್ರಗಳಲ್ಲಿ ಆಚರಿಸಬೇಕಾಗಿದೆ. ಕುವೆಂಪು ಅವರು 1924-25ರಲ್ಲಿ ಕನ್ನಡ ರಾಷ್ಟ್ರಗೀತೆಎಂದು ನಾಡಗೀತೆಯನ್ನು ಬರೆದಿದ್ದರು.  

 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತವಾಗಿ ನಾಡಗೀತೆ ಮನ್ನಣೆ ನೀಡಿತು.  ನಮ್ಮ ನಾಡಗೀತೆಯಲ್ಲಿ ಭಾರತ   ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಮೂಲಕ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತಿವೆ ಎಂದು ಕುವೆಂಪು ಸಾರಿದ್ದಾರೆ ಎಂದರು. 

  ಕಾರ್ಯಕ್ರಮದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ  ಮತ್ತು ವಿವಿಧ ಸಂಘಟನೆಗಳ  ಪದಾಧಿಕಾರಿಗಳಾದ ಪಿ.ಗೋವಿಂದರಾಜು, ಎ.ಜಯರಾಮ್ಆರ್.ಗೋವಿಂದರಾಜು,     ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆಕುಮಾರ್, ಉದಯಾರಾಧ್ಯ, ವೆಂಕಟರಾಜು

ಡಿ.ಶ್ರೀಕಾಂತ್,   ಜಿ.ಎಂ.ನಾಗರಾಜ್, ಅಣ್ಣಯ್ಯವತ್ಸಲಾ, ವೆಂಕಟೇಶರೆಡ್ಡಿಗುರುರಾಜಪ್ಪ, ಎಂ.ಸಿ.ಮಂಜುನಾಥ್ಕೋದಂಡರಾಮ್ಮುನಿರಾಜು, ಸಫೀರ್ನಾಗರತ್ನಮ್ಮದರ್ಗಾಜೋಗಿಹಳ್ಳಿ ಮಲ್ಲೇಶ್, ನಾಗದಳ ನಟರಾಜ್, ರಹೀಮ್ಮಹಾದೇವಪ್ಪ, ರಂಗಸ್ವಾಮಯ್ಯ  ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ